Saturday, August 8, 2026
spot_imgspot_img
spot_imgspot_img

ಕಿರುತೆರೆ ನಟಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಕೋಲ್ಕತ್ತಾ: ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಭಾನುವಾರ ಬೆಳಗ್ಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

20 ವರ್ಷದ ಯುವ ನಟಿಯನ್ನು ತತ್‌ಕ್ಷಣ ಬಂಗೂರ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಅದಾಗಲೇ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪ್ರಾಥಮಿಕ ತನಿಖೆಯ ನಂತರ ಕಾರಣ ಗೊತ್ತಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಅಸಹಜ ಸಾವು ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

‘ರೇಶಮ್ ಜಪಿ’, ‘ಸರಸ್ವತಿ ಪ್ರೇಮ್’, ‘ಅಮಿ ಸಿರಾಜರ್ ಬೇಗಂ’, ‘ಮೊನ್ ಮನೆ ನಾ’ ಚಿತ್ರಗಳಲ್ಲಿ ಪಲ್ಲವಿ ಡೇ ನಟಿಸಿದ್ದರು.

- Advertisement -

Related news

error: Content is protected !!