Saturday, July 5, 2025
spot_imgspot_img
spot_imgspot_img

ಕುಂದಾಪುರ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

- Advertisement -
- Advertisement -
vtv vitla
vtv vitla

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಕಿರಿಮಂಜೇಶ್ವರ ಬಳಿ ಬುಧವಾರ ಸಂಜೆ ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ನಡೆದಿದೆ. ಮೃತರನ್ನು ಬೆಂಗಳೂರಿನ ಆರ್ ವಿಜಯ್ ಅವರ ಪುತ್ರ ಅಕ್ಷಯ್ (23) ಎಂದು ಗುರುತಿಸಲಾಗಿದ್ದು, ತೇಜಸ್ (24), ಪವನ್ (23) ಮತ್ತು ಹರ್ಷ (24) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ನಂತರ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿದೆ. ಹಿಂಬದಿಯಲ್ಲಿ ಕುಳಿತಿದ್ದ ಅಕ್ಷಯ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಗಾಯಾಳುಗಳನ್ನು ಸ್ಥಳೀಯರ ಸಹಕಾರದಿಂದ ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಯುಸಿಯಲ್ಲಿ ಸಹಪಾಠಿಗಳಾಗಿದ್ದ ಈ ನಾಲ್ವರು ಫೆ.26ರಂದು ತೇಜಸ್ ಎಂಬುವರಿಗೆ ಸೇರಿದ ಇನ್ನೋವಾ ಕಾರಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

vtv vitla
vtv vitla
- Advertisement -

Related news

error: Content is protected !!