Thursday, September 10, 2026
spot_imgspot_img
spot_imgspot_img

ಕುಂದಾಪುರ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ

- Advertisement -
- Advertisement -

ಕುಂದಾಪುರ: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಆರೋಪಿಯ ಕೃತ್ಯ ಇದೀಗ ಸಾಬೀತಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದಲ್ಲಿರುವ ಪೋಕೊ ತ್ವರಿತ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ತೀರ್ಪು ನೀಡಿದ್ದು, ಅಪರಾಧಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದ್ದಾರೆ. ಕುಂದಾಪುರದ ಅಮಾಸೆಬೈಲು ನಿವಾಸಿ ಸುರೇಶ್ ಕೊಠಾರಿ ಎಂಬಾತ ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದು, ಈತ ಶಾಲೆಯೊಂದರ ಬಸ್ ಚಾಲಕನಾಗಿದ್ದ.

ಘಟನೆಯ ವಿವರ:

ಶಾಲಾ ಬಸ್ಸಿನಲ್ಲಿ ಆಯಾ ವೃತ್ತಿ ಮಾಡುತ್ತಿದ್ದ 17 ವರ್ಷದ ಬಾಲಕಿಯ ಪರಿಚಯವನ್ನು ದುರ್ಬಳಕೆ ಮಾಡಿಕೊಂಡ ಆರೋಪಿಯು ಆಕೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಘಟನೆ ದಿನ ಶಾಲಾ ಮಕ್ಕಳನ್ನು ಬಿಟ್ಟ ಬಳಿಕ ಆಕೆಯಲ್ಲಿ ಮಾತನಾಡಲು ಇದೆಯೆಂದು ಹೇಳಿ ಬೈಕಿನಲ್ಲಿ ಕಾಡು ಪ್ರದೇಶಕ್ಕೆ ಕರೆದೊಯ್ದು ಬಲಾತ್ಕಾರವಾಗಿ ದೈಹಿಕ ಸಂಪರ್ಕ ನಡೆಸಿದ್ದು, ನಂತರದ ದಿನಗಳಲ್ಲಿಯೂ ಆಕೆಯ ಇಚ್ಛೆಗೆ ವಿರುದ್ಧ ಹಲವು ಬಾರಿ ದೌರ್ಜನ್ಯವೆಸಗಿದ್ದ ಎಂದು ತಿಳಿದು ಬಂದಿದೆ. ಇದೀಗ ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿ ಅಪರಾಧಿ ಎಂದು ಘೋಷಿಸಲಾಗಿದೆ.

- Advertisement -

Related news

error: Content is protected !!