Sunday, May 5, 2024
spot_imgspot_img
spot_imgspot_img

ಕುಂದಾಪುರ: ರಸ್ತೆ ಬಳಿ ನಿಂತಿದ್ದ ಮಹಿಳೆಗೆ ಹಲ್ಲೆ ನಡೆಸಿ ಚಿನ್ನಾಭರಣ ದೋಚಿ ಪರಾರಿಯಾದ ಖದೀಮರು..!

- Advertisement -G L Acharya panikkar
- Advertisement -

ಕುಂದಾಪುರ: ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಪ್ರಮುಖ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಮಹಿಳೆಯ ತಲೆಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎರಗಿಸಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.

ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತರು ಬೈಕ್‌ನಲ್ಲಿ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಈ ಕೃತ್ಯ ಎಸೆಗಿದ್ದಾರೆ ಎಂದು ಹೇಳಲಾಗಿದ್ದು, ಪರಿಣಾಮ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.

ಕೂಡಲೇ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಕಂಡ್ಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!