Monday, June 8, 2026
spot_imgspot_img
spot_imgspot_img

ಕುಂಬಳೆ: ಕೊಳದಲ್ಲಿ ಮುಳುಗಿ ಮೃತಪಟ್ಟ ವಿದ್ಯಾರ್ಥಿ; ಆತ್ಮಹತ್ಯೆ ಶಂಕೆ

- Advertisement -
- Advertisement -

ವಿದ್ಯಾರ್ಥಿಯೋರ್ವ ಕೊಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಕುಂಬಳೆ ಬಳಿಯ ಮುಜಂಗಾವು ಕ್ಷೇತ್ರದ ಕೊಳದಲ್ಲಿ ನಡೆದಿದೆ. ಸೂರಂಬೈಲು ಗೋಪಾಲ ಅವರ ಪುತ್ರ, ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿ ಶರತ್ (17) ಮೃತಪಟ್ಟ ವಿದ್ಯಾರ್ಥಿ.

ಕೆರೆಯ ಪಕ್ಕದಲ್ಲಿ ವಿದ್ಯಾರ್ಥಿಯ ಮೊಬೈಲ್, ಚಪ್ಪಲಿ ಪತ್ತೆಯಾಗಿತ್ತು. ಶೀಘ್ರ ಅಗ್ನಿಶಾಮಕ ದಳದ ತಂಡವು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಯ ಮೃತದೇಹವನ್ನು ಮೇಲಕ್ಕೆತ್ತಿದರು. ಬಳಿಕ ಕಾಸರಗೋಡು ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮೃತ ವಿದ್ಯಾರ್ಥಿಯು ತಂದೆ, ತಾಯಿ, ಸಹೋದರ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ನಿನ್ನೆಯಷ್ಟೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗಿತ್ತು. ಈತ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿದ್ದ. ಈತನ ಪರೀಕ್ಷೆಯಲ್ಲಿ ಫೈಲಾಗಿದ್ದಾನೆ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಕೆಲ ಮೂಲಗಳು ತಿಳಿಸಿದೆ.

- Advertisement -

Related news

error: Content is protected !!