Tuesday, May 7, 2024
spot_imgspot_img
spot_imgspot_img

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತಾಧಿಗಳ ಪ್ರವೇಶಕ್ಕೆ ನಿರ್ಬಂಧ; ಸರ್ಕಾರದ ಆದೇಶದ ಬಳಿಕವೇ ಅವಕಾಶ

- Advertisement -G L Acharya panikkar
- Advertisement -

ಮಂಗಳೂರು: ದ.ಕ ಜಿಲ್ಲೆಯಲ್ಲಿ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವಿಕೆಯು ತೀವ್ರವಾಗಿ ಹೆಚ್ಚಿದ್ದು ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಆದುದರಿಂದ ರೋಗ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಮತ್ತು ಜಿಲ್ಲಾಧಿಕಾರಿಗಳ ಆದೇಶದ ಪ್ರಕಾರ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶವನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಶ್ರೀ ದೇವಳದಲ್ಲಿ ಅರ್ಚಕರು ಮತ್ತು ಅಗತ್ಯ ಸಿಬ್ಬಂದಿಗಳ ಮೂಲಕ ದೈನಂದಿನ ಪೂಜೆಗಳಿಗೆ ಮಾತ್ರ ಅವಕಾಶವಿದ್ದು, ಶ್ರೀ ದೇವಳಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಇಲ್ಲಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ದೇವಳಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶವಿಲ್ಲ.

ಸರಕಾರ ಹಾಗೂ ಜಿಲ್ಲಾಡಳಿತವು ಧಾರ್ಮಿಕ ಕೇಂದ್ರಗಳು ತೆರೆಯಲ್ಪಟ್ಟು ಶ್ರೀ ದೇವರ ದರ್ಶನಾದಿ ಪ್ರವೇಶಕ್ಕೆ ಮುಕ್ತ ಅವಕಾಶಕ್ಕೆ ಆದೇಶ ನೀಡುವ ತನಕ ಶ್ರೀ ದೇವಳಕ್ಕೆ ಭಕ್ತರ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಭಕ್ತರು ಸಹಕರಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ತಿಳಿಸಿದ್ದಾರೆ

- Advertisement -

Related news

error: Content is protected !!