Monday, May 20, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇಗುಲದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕೊರೊನಾ ಪ್ರಕರಣಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೆಚ್ಚಾಗುತ್ತಿದೆ. ಆ ಕಾರಣದಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ.30 ರವರೆಗೆ ಯಾವುದೇ ಸೇವೆಗಳು ನಡೆಯುವುದಿಲ್ಲ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಭಕ್ತರ ಆರೋಗ್ಯದ ಹಿತದೃಷ್ಠಿಯಿಂದ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರಸಿದ್ಧ ಕ್ಷೇತ್ರವಾದ ಕುಕ್ಕೆಯಲ್ಲಿ ಆ.30ರ ದೇವರ ದರುಶನಕ್ಕೆ ಮಾತ್ರ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದ್ದು, ತೀರ್ಥಪ್ರಸಾದ ವಿತರಣೆ, ಅನ್ನಸಂತರ್ಪಣೆ ಇರುವುದಿಲ್ಲ.

ಶನಿವಾರ ಮತ್ತು ಆದಿತ್ಯವಾರ ವಾರಾಂತ್ಯದ ದಿನಗಳಲ್ಲಿ ದೇವರ ದರುಶನಕ್ಕೆ ಕೂಡಾ ಅವಕಾಶ ನಿರ್ಬಂಧಿಸಲಾಗಿದೆ. ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ, ತುಲಾಭಾರ, ಚವಲ, ಪಂಚಾಮೃತ ಮಹಾಭಿಷೇಕ, ಪ್ರಾರ್ಥನೆ ಸೇರಿದಂತೆ ಯಾವುದೇ ಸೇವೆಗಳು ನಡೆಯುವುದಿಲ್ಲ.

ಬೆಳಗ್ಗೆ 7.00-11.30 ತನಕ, ಮಧ್ಯಾಹ್ನ 12.15-1.30 ಹಾಗೂ 2.30-7.00 ತನಕ ಭಕ್ತರು ಶ್ರೀ ದೇವರ ದರುಶನ ಮಾಡಬಹುದು ಹಾಗೂ ಈ ಸಮಯದಲ್ಲಿ ಮಂಗಳಾರತಿ ಸೇವೆ ಸಲ್ಲಿಸಲು ಮಾತ್ರ ಅವಕಾಶ ಕಲ್ಪಿಸಲಾಗಿದೆ.

ವಾರಾಂತ್ಯ ದಿನಗಳನ್ನು ಹೊರತು ಪಡಿಸಿ ಇತರ ದಿನಗಳಲ್ಲಿ ವಸತಿ ಗೃಹದಲ್ಲಿ ತಂಗಲು ಅವಕಾಶವಿದೆ. ತಂಗುವ ಭಕ್ತರು 72 ಗಂಟೆಯೊಳಗೆ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿ ನೆಗೆಟಿವ್ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು ಎಂಬುದನ್ನು ಪ್ರಕಟನೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!