Saturday, April 20, 2024
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಮಾಲೀಕತ್ವ ಪ್ರಮಾಣ ಪತ್ರ

- Advertisement -G L Acharya panikkar
- Advertisement -

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.

ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ ಆನಂದ ಸಿಂಗ್ ಆನೆಯನ್ನು ಕೊಡ ಮಾಡಿದ್ದರು. ಅರಣ್ಯ ಇಲಾಖೆಯ ಈ ಅನುಮತಿ ಪತ್ರಕ್ಕಾಗಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀ ವತ್ಸ ಅವರು ಕೆಲಸ ಮಾಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!