Wednesday, April 24, 2024
spot_imgspot_img
spot_imgspot_img

ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್ ಬೆದರಿಕೆ ಕರೆ

- Advertisement -G L Acharya panikkar
- Advertisement -

ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿನಿಂದ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಬೆಳಗಿನ ಜಾವ 3.30ಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ್ದು, ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಬಾಂಬು ಇಟ್ಟಿರುವುದಾಗಿ ಹೇಳಿದ್ದಾನೆ. ಈ ಹಿನ್ನಲೆಯಿಂದ ಏರ್‌ಲೈನ್ ಗೇಟ್, ಟರ್ಮಿನಲ್ ಮತ್ತು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಯುತ್ತಿದೆ.

ಈಶಾನ್ಯ ವಿಭಾಗದ ಡಿಸಿಪಿ ಅನೂಪ್ ಶೆಟ್ಟಿ ಬಾಂಬ್ ನಿಶ್ಚಿಯ ದಳ ಹಾಗೂ ಶ್ವಾನ ದಳವು ಸ್ಥಳಕ್ಕೆ ಆಗಮಿಸಿದ್ದು ವಿಮಾನ ನಿಲ್ದಾಣದಲ್ಲಿ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಆದರೆ ಈವರೆಗೂ ಯಾವುದೇ ಅನುಮಾಸ್ಪದವಾದ ವಸ್ತು ಕಂಡು ಬಂದಿರುವುದಿಲ್ಲ. ಈ ಹಿನ್ನೆಲೆಯಲ್ಲಿ ಇದೊಂದು ಹುಸಿಬಾಂಬ್ ಕರೆ ಎಂದು ತೀರ್ಮಾನಕ್ಕೆ ಬಂದಿದ್ದಾರೆ. ಸದ್ಯ, ಕರೆ ಮಾಡಿರುವ ಅಪರಿಚಿತ ವ್ಯಕ್ತಿಯ ಬೆನ್ನತ್ತಿರೋ ಪೋಲಿಸರು ಹುಸಿ ಕರೆಯ ಉದ್ದೇಶದ ಹುಡುಕಾಟದಲ್ಲಿ ತೊಡಗಿದ್ದಾರೆ.

- Advertisement -

Related news

error: Content is protected !!