- Advertisement -
- Advertisement -
ನವದೆಹಲಿ: ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಡಾ.ವಿ.ಅನಂತ್ ನಾಗೇಶ್ವರನ್ ಅವರನ್ನು ನೇಮಕ ಮಾಡಲಾಗಿದೆ.
ಅನಂತ್ ನಾಗೇಶ್ವರನ್ ಅವರು ಲೇಖಕ, ಪ್ರಾಧ್ಯಾಪಕ ಹಾಗೂ ಹಣಕಾಸು ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ. ಭಾರತ ಮತ್ತು ಸಿಂಗಾಪುರದಲ್ಲಿ ಹಲವಾರು ವ್ಯಾಪಾರ ಮತ್ತು ನಿರ್ವಹಣಾ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ.
ಅಲ್ಲದೇ ಅನಂತ್ ನಾಗೇಶ್ವರನ್ ಐಎಫ್‌ಎಂಆರ್ ಗ್ರಾಜುಯೇಟ್ ಸ್ಕೂಲ್ ಆಫ್ ಬ್ಯುಸಿನೆಸ್ನ ಡೀನ್ ಆಗಿ ಕಾರ್ಯನಿರ್ವಹಿಸಿದ್ದಾರೆ. 2019 ರಿಂದ 2021ರ ವರೆಗೆ ಪ್ರಧಾನಿಯವರ ಆರ್ಥಿಕ ಸಲಹಾ ಮಂಡಳಿ ಅರೆಕಾಲಿಕ ಸದಸ್ಯರೂ ಆಗಿದ್ದರು.
- Advertisement -