Wednesday, August 5, 2026
spot_imgspot_img
spot_imgspot_img

ಕೇಂದ್ರ ಸಂಪುಟ ಪುನಾರಚನೆ; ಕೇಂದ್ರ ಸಚಿವರಾಗಿ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕಾರ

- Advertisement -
- Advertisement -

ನವದೆಹಲಿ: ಕೇಂದ್ರ ಸಚಿವರಾಗಿ ರಾಜ್ಯದ ಸಂಸತ್ ಸದಸ್ಯರಾದ ಶೋಭಾ ಕರಂದ್ಲಾಜೆ ಮತ್ತು ರಾಜೀವ್ ಚಂದ್ರಶೇಖರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಇಬ್ಬರು ಸದಸ್ಯರಿಗೂ ರಾಜ್ಯ ಸಚಿವ ಸ್ಥಾನ ಮಾನ ನೀಡಲಾಗಿದೆ.

ಖಾತೆ ಹಂಚಿಕೆ ಇಂದು ರಾತ್ರಿ ಅಥವಾ ನಾಳೆ ನಡೆಯಲಿದೆ. ರಾಜೀವ್ ಚಂದ್ರಶೇಖರ್ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಮೂಲತ: ಕೇರಳದವರಾಗಿದ್ದಾರೆ. ಶೋಭಾ ಕರಂದ್ಲಾಜೆ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

ಚಿತ್ರದುರ್ಗ ಕ್ಷೇತ್ರದ ಸಂಸದ ಎ. ನಾರಾಯಣ ಸ್ವಾಮಿ ಕೂಡಾ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಸಂಸದರಾಗಿ ಆಯ್ಕೆಯಾದ ಮೊದಲ ಅವಧಿಯಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಪಡೆದ ಹೆಗ್ಗಳಿಕೆಗೆ ಎ.ನಾರಾಯಣ ಸ್ವಾಮಿ ಪಾತ್ರರಾದರು.

ಬಿಜೆಪಿಯ ಬೀದರ್ ಸಂಸದ ಭಗವಂತ ಖೂಬಾ 17 ನೇ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೃಷಿಕರೂ ಆಗಿರುವ ಖೂಬಾ, ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

- Advertisement -

Related news

error: Content is protected !!