Monday, August 31, 2026
spot_imgspot_img
spot_imgspot_img

ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದ ಪಿ ಎಸ್ ಐ

- Advertisement -
- Advertisement -

ಬೆಳಗಾವಿ: ರಾಜ್ಯದ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಹಿಜಾಬ್ ವಿವಾದ ಇದೀಗ ಕುಂದಾನಗರಿಗೂ ಕಾಲಿಟ್ಟಿದ್ದು, ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಪಿಎಸ್ ಐ ಎಚ್ಚರಿಕೆ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ನಡೆದಿದೆ.

ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸುತ್ತಿದ್ದಂತೆ ಮಾಹಿತಿ ಪಡೆದ ಪೊಲೀಸರು ಕಾಲೇಜು ಆವರಣಕ್ಕೆ ದೌಡಾಯಿಸಿದ್ದು, ವಿದ್ಯಾರ್ಥಿಗಳ ಕೊರಳಲ್ಲಿದ್ದ ಶಾಲು ತೆಗೆಸಿದ್ದಾರೆ.

vtv vitla
vtv vitla

ಅಲ್ಲದೆ, ಶಾಲಾ ಆವರಣದಲ್ಲಿ ಶಾಲು ಧರಿಸದಂತೆ ವಿದ್ಯಾರ್ಥಿಗಳಿಗೆ ಬುದ್ಧಿವಾದ ಹೇಳಿದ್ದಾರೆ. ನಿನ್ನೆ ನಡೆದಿದ್ದ ಈ ಘಟನೆಯನ್ನ ಮುಚ್ಚಿ ಹಾಕಲು ಯತ್ನ ನಡೆದಿದೆ. ಇಡೀ ದಿನ ಹರಸಾಹಸ ಪಟ್ಟು ವಿದ್ಯಾರ್ಥಿಗಳ ಕೊರಳಲ್ಲಿದ್ದ ಕೇಸರಿ ಶಾಲು ತೆಗೆಸಲಾಗಿದೆ.

ಕಾಲೇಜಿಗೆ ಸಂಬಂಧ ಇಲ್ಲದ ಯುವಕರು ವಿವಾದ ಸೃಷ್ಟಿಸುತ್ತಿದ್ದಾರೆ. ಈ ರೀತಿ ಮುಂದೆ ಕಾಲೇಜಿಗೆ ಬಾರದಂತೆ ಯುವಕರಿಗೆ ಪಿಎಸ್ ಐ ಎಚ್ಚರಿಕೆ ನೀಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!