Monday, June 22, 2026
spot_imgspot_img
spot_imgspot_img

ಕೊಣಾಜೆ: ಬ್ಯಾಂಕ್ ಉದ್ಯೋಗಿ ನೇಣಿಗೆ ಶರಣು

- Advertisement -
- Advertisement -

ಕೊಣಾಜೆ: ಕೊಣಾಜೆ ಗ್ರಾಮದ ಬೆಳ್ಮ ಬಳಿ ವಿವಾಹಿತ ಬ್ಯಾಂಕ್ ಉದ್ಯೋಗಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಕೊಣಾಜೆ ಮುಚ್ಚಿಲ ಕೋಡಿ ನಿವಾಸಿ ಚರಣ್ ರಾಜ್ ಶೆಟ್ಟಿ (35) ಎಂದು ಗುರುತಿಸಲಾಗಿದೆ.

ಪತ್ನಿ ಮಕ್ಕಳೊಂದಿಗೆ ತಾಯಿ ಮನೆಗೆ ಹೋಗಿದ್ದ ವೇಳೆ ಚರಣ್ ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ಕಾರಣ‌ ತಿಳಿದುಬಂದಿಲ್ಲ.

ಈ ಬಗ್ಗೆ ಕೊಣಾಜೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!