Thursday, March 28, 2024
spot_imgspot_img
spot_imgspot_img

ಕೊರಗ ಸಮುದಾಯದ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ಪ್ರಕರಣ; ಸಚಿವ ಕೋಟ ವಿರುದ್ದ ಗರಂ ಆದ ಸಿದ್ದರಾಮಯ್ಯ

- Advertisement -G L Acharya panikkar
- Advertisement -
suvarna gold
vtv vitla

ಕೋಟ : ಕೋಟತಟ್ಟು ಗ್ರಾಮದಲ್ಲಿ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿ ದೌರ್ಜನ್ಯ ನಡೆಸಿದಲ್ಲದೆ ಇದೀಗ ಪೊಲೀಸರ ಮೇಲೆ ಪ್ರಕರಣ ದಾಖಲಿಸಿರುವ ಪೊಲೀಸರ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಖಂಡಿಸಿದ್ದಾರೆ. ಹಿಂದುಗಳೆಲ್ಲ ಒಂದು ಎಂದು ಉದ್ಘೋಷಿಸುತ್ತಿರುವ ಬಿಜೆಪಿಯಲ್ಲಿ ಕೊರಗ ಸಮುದಾಯ ಸೇರಿಲ್ಲವೇ?. ದಲಿತರನ್ನು ಅಸ್ಪರ್ಶರನ್ನಾಗಿಯೇ ಉಳಿಸುವುದು ಇವರ ಗುಪ್ತ ಅಜೆಂಡಾವೇ ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.


ಕೋಟತಟ್ಟು ಗ್ರಾಮದಲ್ಲಿ ನಡೆದ ಕೊರಗ ಸಮುದಾಯದ ಮೆಹಂದಿ ಕಾರ್ಯಕ್ರಮಕ್ಕೆ ನುಗ್ಗಿದ ಪೊಲೀಸರು ಮದುಮಗ ಸೇರಿದಂತೆ ಸ್ಥಳೀಯರ ಮೇಲೆ ಹಲ್ಲೆ ನಡೆಸಿದ್ದರು. ಈ ಪ್ರಕರಣ ಸುದ್ದಿಯಾಗುತ್ತಿದ್ದಂತೆ ಕೋಟ ಠಾಣೆಯ ಎಸ್ ಐ ನ್ನು ಅಮಾನತು ಮಾಡಲಾಗಿದ್ದು, ಉಳಿದ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ ಮತ್ತೆ ಪೊಲೀಸರು 7 ಜನ ಕೊರಗ ಸಮುದಾಯದವರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿದ್ದಾರೆ. ಇದು ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.


ದೌರ್ಜನ್ಯಕ್ಕೀಡಾದ ಕೊರಗರ ಪರ ಕಂಬನಿ ಮಿಡಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಗಮನಕ್ಕೆ ಬರದೆ ಪೊಲೀಸರು ಕೊರಗ ಬಂಧುಗಳ ವಿರುದ್ದ ಪ್ರಕರಣ ದಾಖಲಿಸಿದ್ದಾರೆಯೇ? ಹಾಗೆ ನಡೆದಿದ್ದರೆ ಅವರೊಬ್ಬ ಅಸಮರ್ಥ ಸಚಿವ ಎಂದ ಅವರು ಗಮನಕ್ಕೆ ಬಂದು ನಡೆದಿದ್ದರೆ ಅದು ಆತ್ಮವಂಚಕ ನಡವಳಿಕೆ.
ಹಿಂದುಗಳ ರಕ್ಷಣೆಗಾಗಿಯೇ ಅವತಾರವೆತ್ತಿ ಬಂದವರಂತೆ ಬೊಬ್ಬಿಡುತ್ತಿರುವ, ಸ್ಥಳೀಯ ಲೋಕಸಭಾ ಸದಸ್ಯರೂ ಆಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಮೌನವನ್ನು ಕೊರಗರ ಮೇಲಿನ ಪೊಲೀಸ್ ದೌರ್ಜನ್ಯಕ್ಕೆ ಮೌನಸಮ್ಮತಿ ಎಂದು ಅರ್ಥೈಸೋಣವೇ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್!!

ಇದನ್ನೂ ಓದಿ: ಕೊರಗ ಸಮುದಾಯದವರ ಮೆಹಂದಿ ಕಾರ್ಯಕ್ರಮದಲ್ಲಿ ಪೊಲೀಸರಿಂದ ಹಲ್ಲೆ ಪ್ರಕರಣ! ಕೋಟ PSI ಸಂತೋಷ್ ಅಮಾನತು.!

- Advertisement -

Related news

error: Content is protected !!