Saturday, May 18, 2024
spot_imgspot_img
spot_imgspot_img

ಕೊರೊನಾ ಮಾರ್ಗಸೂಚಿ ಪಾಲನೆ ಮಾಡದೇ ಇದ್ದಲ್ಲಿ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌; ಸಿಎಂ ಯಡಿಯೂರಪ್ಪ ಎಚ್ಚರಿಕೆ.

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ವೈರಸ್‌ ಸೋಂಕು ಲಾಕ್‌ ಡೌನ್‌ ಬೆನ್ನಲ್ಲೇ ಏರಿಕೆಯಾಗುತ್ತಿದೆ. ಒಂದೊಮ್ಮೆ ಜನರು ಕೊರೊನಾ ಮಾರ್ಗಸೂಚಿಯನ್ನು ಪಾಲನೆ ಮಾಡದಿದ್ರೆ 15 ದಿನಗಳ ಬಳಿಕ ವಿನಾಯಿತಿಯನ್ನ ರದ್ದುಪಡಿಸಿ, ಲಾಕ್‌ ಡೌನ್‌ ಹೇರಿಕೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆಯನ್ನು ನೀಡಿದ್ದಾರೆ.

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಕಡಿಮೆಯಾದ ಬೆನ್ನಲ್ಲೇ ರಾಜ್ಯ ಸರಕಾರ ಲಾಕ್‌ ಡೌನ್‌ ಅನ್ನು ಹಂತ ಹಂತವಾಗಿ ತೆರವು ಮಾಡಲಾಗಿತ್ತು. ಅಲ್ಲದೇ ಜುಲೈ 3ರಿಂದ ಜುಲೈ 19ರವರೆಗೆ ಅನ್‍ಲಾಕ್ ಜಾರಿ ಮಾಡಲಾಗಿತ್ತು. ಆದರೆ ಅನ್‌ ಲಾಕ್‌ ಆದೇಶ ಜಾರಿಯಾದ ಬೆನ್ನಲ್ಲೇ ಕೆಲವು ಜಿಲ್ಲೆಗಳಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆಯಾಗುತ್ತಿದೆ. ಅಲ್ಲದೇ ಜನರು ಮಾಸ್ಕ್‌, ಸಾಮಾಜಿಕ ಅಂತರವನ್ನು ಮರೆಯುತ್ತಿದ್ದಾರೆ. ಇದರಿಂದಾಗಿ ಸೋಂಕು ಏರಿಕೆಯಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ನೀಡಿರುವ ಹೇಳಿಕೆ ಮಹತ್ವವನ್ನು ಪಡೆದುಕೊಂಡಿದೆ. ನಿತ್ಯವೂ ಕರ್ನಾಟಕದಲ್ಲಿ ಎರಡು ಸಾವಿರಕ್ಕೂ ಅಧಿಕ ಕೊರೊನಾ ಪ್ರಕರಣಗಳು ದಾಖಲಾಗುತ್ತಿದೆ. ನಿಧಾನವಾಗಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ.

ಇನ್ನೊಂದೆಡೆ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಏರಿಕೆ ಕಂಡಿದೆ. ಜೊತೆಗೆ ತಜ್ಞರು ಕೂಡ ರಾಜ್ಯದಲ್ಲಿ ಮೂರನೇ ಅಲೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಜುಲೈ 19ರ ಬಳಿಕ ರಾಜ್ಯದಲ್ಲಿ ಮತ್ತೆ ಲಾಕ್‌ ಡೌನ್‌ ಜಾರಿಯಾಗುತ್ತಾ ಅನ್ನೋ ಪ್ರಶ್ನೆಯನ್ನು ಹುಟ್ಟುಹಾಕಿದೆ.

- Advertisement -

Related news

error: Content is protected !!