Sunday, April 28, 2024
spot_imgspot_img
spot_imgspot_img

ಕೊರೊನ ಹೆಚ್ಚಳ ಹಿನ್ನೆಲೆ; ದ.ಕ ಜಿಲ್ಲೆಯ ಎಲ್ಲಾ ಧಾರ್ಮಿಕ ಕೇಂದ್ರಗಳಲ್ಲಿ ನಡೆಯುವ ಜಾತ್ರೆ, ಉತ್ಸವಗಳಿಗೆ ಜಿಲ್ಲಾಡಳಿತದಿಂದ ನೂತನ ಮಾರ್ಗಸೂಚಿ ಬಿಡುಗಡೆ

- Advertisement -G L Acharya panikkar
- Advertisement -
suvarna gold

ಮಂಗಳೂರು: ರಾಜ್ಯದಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಕಾರಣ ದ.ಕ. ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಯವರ ಕಾರ್ಯಾಲಯವು ಧಾರ್ಮಿಕ ಸಂಸ್ಥೆಗಳ ಆಡಳಿತಾಧಿಕಾರಿ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ, ಅನುವಂಶಿಕ ಮೊತ್ತೇಸರರು, ಆಡಳಿತದಾರರಿಗೆ ಸಂಸ್ಥೆಗಳಲ್ಲಿ ನಡೆಯುವ ಜಾತ್ರಾ ಸಂದರ್ಭದಲ್ಲಿ ಸೋಂಕು ನಿಯಂತ್ರಣದ ಕುರಿತು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ದ.ಕ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹಾಗೂ ಓಮಿಕ್ರಾನ್ ರೂಪಾಂತರ ವೈರಸ್ ಉಲ್ಬಣಗೊಳ್ಳುತ್ತಿರುವ ಹಿನ್ನೆಲೆ ಸರ್ಕಾರದ ಉಲ್ಲೇಖದ ಆದೇಶದಲ್ಲಿ ಜಾತ್ರೆಗಳು, ಹಬ್ಬಗಳು,
ಮೆರವಣಿಗೆಗಳು ಮತ್ತು ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ನೀಡದಿರುವುದರಿಂದ ಕೋರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟನಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ y ದೇವಾಲಯಗಳಲ್ಲಿ ಈಗಾಗಲೇ ಪ್ರಾರಂಭವಾಗಿರುವ ಜಾತ್ರಾ ಉತ್ಸವ, ರಥೋತ್ಸವ ಉತ್ಸವಾದಿಗಳನ್ನು ದೇವಾಲಯದ ಆಗಮಿಕರು, ತಂತ್ರಿಗಳು, ಅರ್ಚಕರು, ಆಡಳಿತ ಮಂಡಳಿ ಸಿಬ್ಬಂದಿಯವರು ಸಾಂಕೇತಿಕವಾಗಿ ದೇವಾಲಯದ ಒಳಾಂಗಣ ಹಾಗೂ ಆವರಣದೊಳಗೆ ಭಕ್ತಾದಿಗಳು ಸಾರ್ವಜನಿಕರ ಸಂದಣಿ ಇಲ್ಲದಂತೆ ನಡೆಸಿ ಪೂರ್ಣಗೊಳಿಸಲು ತಿಳಿಸಲಾಗಿದೆ.

vtv vitla
vtv vitla

ಧಾರ್ಮಿಕ ಸಂಸ್ಥೆಗಳಲ್ಲಿ ಜಾತ್ರಾ ಸಂದರ್ಭಗಳಲ್ಲಿ ಸಭೆ ಸಮಾರಂಭಗಳು ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂತೆ, ಸಾರ್ವಜನಿಕ ಅನ್ನಸಂತರ್ಪಣೆ ಇನ್ನಿತರ ಜನಸಂದಣಿ ಸೇರುವ ಕಾರ್ಯಕ್ರಮಗಳಿಂದ
ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಭಕ್ತಾದಿಗಳ ಹಿತದೃಷ್ಟಿಯಿಂದ ಸರ್ಕಾರದ
ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

- Advertisement -

Related news

error: Content is protected !!