Monday, May 6, 2024
spot_imgspot_img
spot_imgspot_img

ಕೊರೊನ ಹೆಚ್ಚಳ ಹಿನ್ನೆಲೆ; ಪೊಳಲಿ ಹಾಗೂ ಪಣೋಲಿಬೈಲು ದೈವಸ್ಥಾನದಲ್ಲಿ ಮುಂದಿನ ಅದೇಶದವರೆಗೆ ಎಲ್ಲಾ ಸೇವೆಗಳು ಸ್ಥಗಿತ

- Advertisement -G L Acharya panikkar
- Advertisement -
suvarna gold

ಬಂಟ್ವಾಳ: ಕೊರೋನಾ ಹಾಗೂ ಕೊರೋನಾ ರೂಪಾಂತರಿ ತಳಿ ಒಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ಹಾಗೂ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನದಲ್ಲಿ ದ.ಕ ಜಿಲ್ಲಾಧಿಕಾರಿಯವರ ಆದೇಶದಂತೆ ಜ. 06ರಿಂದ ಮುಂದಿನ ಆದೇಶದವರೆಗೆ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಎರಡು ಡೋಸ್ ಪಡೆದ ಭಕ್ತಾದಿಗಳಿಗೆ ಮಾತ್ರ ದೇವರ ದರ್ಶನಕ್ಕೆ ಅವಕಾಶ ವಿದ್ದು, ಒಂದು ಬಾರಿಗೆ 50ಮಂದಿಗೆ ಮಾತ್ರ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಎರಡೂ ಧಾರ್ಮಿಕ ಕೇಂದ್ರದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ ತಿಳಿಸಿದ್ದಾರೆ.

vtv vitla
vtv vitla

ಶುಕ್ರವಾರ ರಾತ್ರಿ ಎಂಟರಿಂದ ಸೋಮವಾರ ಬೆಳಗ್ಗೆ ಐದರವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರುವುದರಿಂದ ಶನಿವಾರ ಮತ್ತು ಭಾನುವಾರ ದೇವರ ದರ್ಶನಕ್ಕೆ ಕೂಡಾ ಅವಕಾಶವಿರುವುದಿಲ್ಲ. ಉಳಿದಂತೆ ಇತರ ದಿನಗಳಲ್ಲಿ ದೇವಸ್ಥಾನಕ್ಕೆ ಆಗಮಿಸುವ ಭಕ್ತರು ಕಡ್ಡಾಯ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡುವುದು ಮೊದಲಾದ ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದವರು ತಿಳಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!