Friday, April 26, 2024
spot_imgspot_img
spot_imgspot_img

ಕೊರೊನ ಹೆಚ್ಚಳ ಹಿನ್ನೆಲೆ; ರಾಜ್ಯದಲ್ಲಿ ಜ. 31ರವರೆಗೆ ನಿರ್ಬಂಧ ಮುಂದುವರಿಕೆ; ಸಿಎಂ ಬೊಮ್ಮಾಯಿ

- Advertisement -G L Acharya panikkar
- Advertisement -
suvarna gold

ಬೆಂಗಳೂರು: ರಾಜ್ಯದಲ್ಲಿ ಸದ್ಯ ಆರೋಗ್ಯ ಇಲಾಖೆ ನೀಡುತ್ತಿರುವ ಕೊರೋನಾ ವರದಿಯ ಪ್ರಕಾರ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಹೆಚ್ಚುವರಿ ನಿಯಂತ್ರಣ ಜಾರಿಗೊಳಿಸಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವರ್ಚುವಲ್ ಮೀಟಿಂಗ್ ನಡೆಸಿದು, ಸರಕಾರದ ನಿರ್ಧಾರದ ಪ್ರಕಾರ ರಾಜ್ಯದಾದ್ಯಂತ ಎಲ್ಲಾ ರೀತಿಯ ರ್‍ಯಾಲಿಗಳು, ಧರಣಿಗಳು ಮತ್ತು ಪ್ರತಿಭಟನೆಗಳನ್ನು ನಿಷೇಧಿಸಿದೆ. ಜನವರಿ 31ರವರೆಗೆ ಮುಂದುವರಿಕೆಯಾಗಲಿದೆ ಎಂದು ಸರಕಾರ ಹೇಳಿದೆ. ಇನ್ನು ಶಾಲೆಗಳನ್ನು ಮುಚ್ಚುವ ಬಗ್ಗೆ ಕೈಗೊಳ್ಳಬೇಕಾದ ನಿರ್ಧಾರದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

vtv vitla
vtv vitla

ಮದುವೆ ಸಮಾರಂಭಗಳಲ್ಲಿ ಈ ಹಿಂದಿನ ಆದೇಶವನ್ನೇ ಮುಂದುವರೆಸಲಾಗಿದ್ದು, ತೆರೆದ ಸ್ಥಳದಲ್ಲಿ 200 ಮಂದಿ ಹಾಗೂ ಒಳಾಂಗಣದಲ್ಲಿ 100 ಜನರು ಭಾಗವಹಿಸಲಷ್ಟೇ ಅವಕಾಶ ಎಂದು ಉಲ್ಲೇಖಿಸಲಾಗಿದೆ.

ಮಹಾರಾಷ್ಟ್ರ, ಕೇರಳ ಮತ್ತು ಗೋವಾ ಗಡಿಗಳಲ್ಲಿ ಕಣ್ಗಾವಲು ತೀವ್ರಗೊಳಿಸಲಾಗಿದೆ. ಇನ್ನು ದೇವಸ್ಥಾನಗಳಿಗೂ ಭಕ್ತರ ಪ್ರವೇಶಕ್ಕೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ದೇವಸ್ಥಾನಗಳು, ಮಂದಿರ, ಮಸೀದಿ ಮತ್ತು ಚರ್ಚ್‌ಗಳಲ್ಲಿ ಪೂಜೆ ಪುನಸ್ಕಾರ, ಆಚರಣೆಗೆ ಯಾವುದೇ ನಿರ್ಬಂಧ ಇಲ್ಲ. ಅಲ್ಲಿನ ಸೇವೆಗಳು ಎಂದಿನಂತೆ ನಡೆಯುತ್ತವೆ. ಆದರೆ, ಭಕ್ತರ ಪ್ರವೇಶಕ್ಕೆ ಮಾತ್ರ ಮಿತಿ ಇರಬೇಕು ಎಂದು ಸಚಿವ ಆರ್. ಅಶೋಕ್ ಹೇಳಿದರು.

ಅಲ್ಲದೆ, ರಾಜ್ಯದಲ್ಲಿ ಮಾರುಕಟ್ಟೆಯ ವಿಕೇಂದ್ರಿಕರಣಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ಬುಧವಾರದಿಂದಲೇ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಲಾಗಿದೆ.

- Advertisement -

Related news

error: Content is protected !!