Friday, April 26, 2024
spot_imgspot_img
spot_imgspot_img

ಕೊವಿಡ್ 3ನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದ ಸಮಿತಿಯಿಂದ ಸಿಎಂ ಯಡಿಯೂರಪ್ಪರವರಿಗೆ ಮಧ್ಯಂತರ ವರದಿ

- Advertisement -G L Acharya panikkar
- Advertisement -

ಬೆಂಗಳೂರು: ಕೊವಿಡ್ 3ನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿ ಪ್ರಸಾದ್ ಶೆಟ್ಟಿ ಅವರ ನೇತೃತ್ವದ ಸಮಿತಿ ಸಿಎಂ ಯಡಿಯೂರಪ್ಪಗೆ ಮಧ್ಯಂತರ ವರದಿ ಸಲ್ಲಿಸಲಿದೆ.

ವರದಿಯನ್ನು ಕೂಲಂಕುಶವಾಗಿ ಪರಿಶೀಲಿಸಿ ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ ನಿರ್ಣಯ ತೆಗೆದು ಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‌ಕುಮಾರ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನಡೆಸಿದ ಅಧ್ಯಯನದಲ್ಲಿ ಶಾಲೆಗಳು ನಡೆಯದ ಕಾರಣ ಶೇ.30 ರಷ್ಟು ಮಕ್ಕಳು ಕಲಿಕೆಯಿಂದ ಹೊರ ಗುಳಿದು ಶೈಕ್ಷಣಿಕ ಚಟುವಟಿಕೆಗಳಿಂದ ಹೊರಗುಳಿದಿ ದ್ದಾರೆ ಎಂಬ ಅಂಶವು ಬಹಿರಂಗಗೊಂಡಿದೆ.

ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು ಇಂದು ಮುಖ್ಯಮಂತ್ರಿಗಳಿಗೆ ಡಾ.ದೇವಿ ಶೆಟ್ಟಿ ಅವರ ವರದಿಯು ಸಲ್ಲಿಕೆಯಾಗಲಿದೆ ಆ ಒಂದು ವರದಿ ತಮ್ಮ‌ ಕೈಸೇರಿದ ಬಳಿಕ ಅದನ್ನು ಕೂಲಂಕುಷವಾಗಿ ಪರಿಶೀಲಿಸಿ ಶಾಲಾ ಚಟುವಟಿಕೆಗಳ‌ ಕುರಿತಂತೆ ಮುಂದಿನ‌ ದಿನಗಳಲ್ಲಿ ಸೂಕ್ತ‌ ನಿರ್ಣಯವನ್ನು ತೆಗೆದುಕೊಳ್ಳಲಾಗುವುದೆಂದು ಸಚಿವ ಸುರೇಶ್‌ ಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತ ನಾಡಿದ ಸಚಿವರು ತರಗತಿ ಕಲಿಕೆಯ ಬಗ್ಗೆ ವರದಿ ಯಲ್ಲಿ‌ ಉಲ್ಲೇಖವಿದೆ ಎಂದು ಮಾಧ್ಯಮಗಳಲ್ಲಿ ಯಷ್ಟೇ ನೋಡಿದ್ದೇನೆ.‌ ವರದಿ ತಮ್ಮ‌ ಕೈಸೇರಿದ ಬಳಿಕವಷ್ಟೇ ಪ್ರತಿಕ್ರಿಯಿಸಲು ಸಾಧ್ಯ ಎಂದರು.

ಸರ್ಕಾರಕ್ಕೆ ಶಾಲೆಗಳನ್ನು ತೆರೆಯಬೇಕೆಂಬ ಉತ್ಸು ಕತೆ, ತರಗತಿ ಕಲಿಕೆ ಮುಖ್ಯವೆನ್ನುವುದು ಸಾಮಾನ್ಯ ಅಭಿಪ್ರಾಯವಾಗಿದ್ದರೂ ಹಲವಾರು ಅಂಶಗಳನ್ನು ಗಮನಿಸಬೇಕಾದ ಅನಿವಾರ್ಯತೆ ಇದೆ ಹಾಗಾಗಿ ಡಾ.ದೇವಿಶೆಟ್ಟಿ ಅವರು ಸಲ್ಲಿಸಲಿರುವ ವರದಿಯನ್ನು ಪರಿಪೂರ್ಣವಾಗಿ ಗಮನಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳಲಾಗುತ್ತದೆ ಎಂದರು.

ಈ ಅಧ್ಯಯನ ವರದಿಯ ಬೆಳಕಿನಲ್ಲಿ ನಾವು ಈ ವರ್ಷ ಮಕ್ಕಳು ಶಿಕ್ಷಣದಿಂದ ವಂಚಿತರಾ ಗದಂತೆ ಹೆಚ್ಚಿನ ರೀತಿಯ ಗಮನಹರಿಸುವ ಸವಾಲು ನಮ್ಮ ಮುಂದಿದೆ ಎಂದು ಸುರೇಶ್ ಕುಮಾರ್ ಹೇಳಿದರು.

- Advertisement -

Related news

error: Content is protected !!