Wednesday, May 1, 2024
spot_imgspot_img
spot_imgspot_img

ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ದಾಳಿ ನಡೆಸಿ ಲಾಠಿ ಚಾರ್ಜ್!!

- Advertisement -G L Acharya panikkar
- Advertisement -

ಕೋಟ: ಮೆಹಂದಿ ಕಾರ್ಯಕ್ರಮ ನಡೆಯುತ್ತಿದ್ದ ಮನೆಗೆ ಪೊಲೀಸರು ಏಕಾಏಕಿ ದಾಳಿ ನಡೆಸಿ ಲಾಠಿ ಚಾರ್ಜ್ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎನ್ನುವ ಆರೋಪ‌ ಕೋಟ ಪೊಲೀಸ್ ಠಾಣೆ ವ್ಯಾಪ್ತಿಯ ಬಾರಿಕೆರೆಯಲ್ಲಿ ಸೋಮವಾರ ರಾತ್ರಿ ಕೇಳಿ ಬಂದಿದೆ.

ಮೆಹಂದಿ ಕಾರ್ಯಕ್ರಮದಲ್ಲಿ ತಡರಾತ್ರಿವರೆಗೂ ಡಿಜೆ ಅಳವಡಿಸಲಾಗಿತ್ತು.ಈ ಸಂದರ್ಭ ಡಿಜೆ ಶಬ್ಧದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ ಎಂದು ಸ್ಥಳೀಯರೋರ್ವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಹೀಗಾಗಿ ಏಕಾಏಕಿ ಮದುವೆ ಮನೆಗೆ ನುಗ್ಗಿದ ಪೊಲೀಸರು ಮಹಿಳೆಯರು, ಮಕ್ಕಳು ಹಾಗೂ ವರನ ಸಹಿತ ಎಲ್ಲರ ಮೇಲೂ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

vtv vitla

ಮೆಹಂದಿ ಮನೆಯಿಂದ ಮದುಮಗ ಹಾಗೂ ಎಸ್ ಟಿ ಸಮುದಾಯದ ಮುಖಂಡ ಸಹಿತ ಐವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಇದರಿಂದ ಆಕ್ರೋಶಿತಗೊಂಡ ಸ್ಥಳೀಯರು ಹಾಗೂ ಎಸ್ ಟಿ ಸಮುದಾಯದವರು ರಾತ್ರೋರಾತ್ರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು‌. ಅನಂತರ ವಶಕ್ಕೆ ಪಡೆದವರನ್ನು ಬಿಡುಗಡೆಗೊಳಿಸಲಾಯಿತು.

ಘಟನಾ ಸ್ಥಳಕ್ಕೆ ಡಿವೈಎಸ್ಪಿ ಹಾಗೂ ಬ್ರಹ್ಮಾವರ ಸರ್ಕಲ್ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಭೇಟಿ ನೀಡಿ ಮಾಹಿತಿ ಕಲೆ ಹಾಕಿದರು. ಈ ಘಟನೆ ಅತ್ಯಂತ ಅಮಾನವೀಯ ಮತ್ತು ಹೇಯವಾದದ್ದು. ಆದ್ದರಿಂದ ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಎಸ್ ಟಿ ಸಮುದಾಯದ ಮುಖಂಡರು,ಸ್ಥಳಿಯರು ಆಗ್ರಹಿಸಿದರು. ಹಲ್ಲೆ ನಡೆಸಿದ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡದಿದ್ದರೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದೆಂದು ಎಚ್ಚರಿಸಿದ್ದಾರೆ.

- Advertisement -

Related news

error: Content is protected !!