Sunday, May 19, 2024
spot_imgspot_img
spot_imgspot_img

ಕ್ರಿಕೆಟ್ ಬೆಟ್ಟಿಂಗ್ ಗಾಗಿ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಓರ್ವನ ಬಂಧನ

- Advertisement -G L Acharya panikkar
- Advertisement -

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ಗಾಗಿ ದ್ವಿಚಕ್ರ ವಾಹನಗಳನ್ನುಕಳವು ಮಾಡುತ್ತಿದ್ದ ಓರ್ವನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂ. ಕಳೆದುಕೊಂಡು ಸಾಲ ತೀರಿಸಲು ಮನೆಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆಂಧ್ರಪ್ರದೇಶ ಮೂಲದ ಯುವಕನೊಬ್ಬನನ್ನು ಭಾರತೀ ನಗರ ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಪ್ರದೇಶದ ಕುಪ್ಪಂ ಜಿಲ್ಲೆಯ ಲಕ್ಷ್ಮೀಪತಿ (24) ಬಂಧಿತ. ಆರೋಪಿಯಿಂದ 4 ಲಕ್ಷ ರೂ.ಮೌಲ್ಯದ 10 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಲಕ್ಷ್ಮೀಪತಿ ಐಟಿಐ ವ್ಯಾಸಂಗ ಮಾಡಿದ್ದು, ಹೊಸೂರು ಬಳಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಇದರೊಂದಿಗೆ ಕ್ರಿಕೆಟ್‌ ಜೂಜಾಟದಲ್ಲಿ ತೊಡಗಿಸಿಕೊಂಡಿದ್ದು, ಹಣ ಕಳೆದುಕೊಂಡಿದ್ದ. ಅದರಿಂದ ಲಕ್ಷಾಂತರ ರೂ. ಸಾಲ ಮಾಡಿಕೊಂಡಿದ್ದ. ಅದನ್ನು ತೀರಿಸಲು ಬೇರೆ ಮಾರ್ಗವಿಲ್ಲದೆ, ಮನೆ ಮುಂದೆ ನಿಂತಿರುವ ದ್ವಿಚಕ್ರ ವಾಹನಗಳನ್ನು ಕದ್ದು ಕಡಿಮೆ ಮೊತ್ತಕ್ಕೆ ಮಾರಾಟ ಮಾಡುತ್ತಿದ್ದ. ಈತ ಬೆಂಗಳೂರಿನ ಆಡುಗೋಡಿ, ಭಾರತೀನಗರ ಠಾಣೆ ವ್ಯಾಪ್ತಿ ಮಾತ್ರವಲ್ಲದೆ, ತಮಿಳುನಾಡಿನ ಕೃಷ್ಣಗಿರಿಯಲ್ಲೂ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದರು. ಭಾರತೀನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!