Saturday, May 11, 2024
spot_imgspot_img
spot_imgspot_img

ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ರಾಜ್ಯ ಸರಕಾರದಿಂದ ರೂ.5 ಸಾವಿರ ಪರಿಹಾರ; ಅರ್ಜಿ ಸಲ್ಲಿಸುವುದು ಹೇಗೆ..?

- Advertisement -G L Acharya panikkar
- Advertisement -

ಬೆಂಗಳೂರು: ಲಾಕ್ ಡೌನ್ ಹೇರಿಕೆಯ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ರಾಜ್ಯ ಸರಕಾರ 5 ಸಾವಿರ ರೂ. ಪರಿಹಾರ ಪ್ಯಾಕೇಜ್ ಘೋಷಣೆ ಮಾಡಿದೆ.

ಹಾಗಾದ್ರೆ ಪರಿಹಾರ ಅರ್ಜಿ ಸಲ್ಲಿಸೋದು ಹೇಗೆ ? ರಾಜ್ಯ ಸರಕಾರ ಶಿಕ್ಷಕರ ಒತ್ತಡಕ್ಕೆ ಮಣಿದು ಅನುದಾನಿತ ಶಾಲಾ ಶಿಕ್ಷಕರಿಗೆ 5 ಸಾವಿರ ರೂಪಾಯಿಯ ಪರಿಹಾರದ ಹಣವನ್ನು ಬಿಡುಗಡೆ ಮಾಡಿದೆ. ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಶಿಕ್ಷಕರು ಲಾಕ್ ಡೌನ್ ವಿಶೇಷ ಪರಿಹಾರವನ್ನು ಪಡೆಯಲು ಶಾಲಾ ಮುಖ್ಯ ಶಿಕ್ಷಕರ ಮೂಲಕ ಅಗತ್ಯ ದಾಖಲೆಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸಲ್ಲಿಕೆ ಮಾಡಲು ಸೂಚಿಸಲಾಗಿದೆ.

ಲಾಕ್ ಡೌನ್ ಸಹಾಯದನಕ್ಕೆ ಅರ್ಜಿ ಸಲ್ಲಿಸುವ ಶಿಕ್ಷಕರು, ಸಂಸ್ಥೆ ನೀಡಿರುವ ಗುರುತಿನ ಚೀಟಿ, ನೇಮಕಾತಿ ಆದೇಶ, ಸೇವಾ ಪ್ರಮಾಣ ಪತ್ರದ ಪ್ರತಿ, ಆಧಾರ್ ಕಾರ್ಡ್, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಬುಕ್ ಪ್ರತಿ, ಎಸ್ಎಟಿಎಸ್ ಶಿಕ್ಷಕರ ಗುರುತಿನ ಚೀಟಿ, ಒಂದು ಪಾಸ್ ಪೋರ್ಟ್ ಸೈಜಿನ ಬಾವಚಿತ್ರದ ಜೊತೆಗೆ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರದ ಜೊತೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಿಕ್ಷಕರು ಸಲ್ಲಿಸಿರುವ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಹಣವನ್ನು ಬಿಡುಗಡೆ ಮಾಡಲಿದ್ದಾರೆ. 5 ಸಾವಿರ ರೂಪಾಯಿ ಪರಿಹಾರದ ಹಣ ನೇರವಾಗಿ ಶಿಕ್ಷಕರ ಖಾತೆಗಳಿಗೆ ಜಮೆಯಾಗಲಿದೆ.

- Advertisement -

Related news

error: Content is protected !!