Sunday, July 6, 2025
spot_imgspot_img
spot_imgspot_img

ಖಾಸಗಿ ಪೋಟೊ ತೆಗೆದು ಬ್ಲಾಕ್‌ಮೇಲ್ ಮಾಡುತ್ತಿದ್ದ ಯುವಕನನ್ನು ಹತ್ಯೆಗೈದ ವಿದ್ಯಾರ್ಥಿನಿಯರು..!

- Advertisement -
- Advertisement -
vtv vitla

ಚೆನ್ನೈ: ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿಯ ಶವವನ್ನು ಹೂತಿಟ್ಟ ಆರೋಪದ ಮೇಲೆ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ತಮಿಳುನಾಡಿನ ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ತಿರುವಳ್ಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಪೊಲೀಸರಿಗೆ ಸಂತ್ರಸ್ತನ ಮೊಬೈಲ್ ಫೋನ್ ಸಿಕ್ಕಿದ್ದು ಚೆಂಗಾಲಪಟ್ಟು ಜಿಲ್ಲೆಯಲ್ಲಿನ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಸುಳಿವು ಪತ್ತೆಯಾಗಿದ್ದು, ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರೇಮ್ ಕುಮಾರ್ ತಮ್ಮನ್ನು ಬ್ಲಾಕ್‌ ಮೇಲ್ ಮಾಡುತ್ತಿದ್ದದ್ದಾಗಿ ತಿಳಿಸಿದ್ದಾರೆ.

ಆತ ಒಬ್ಬರಿಗೊಬ್ಬರಿಗೆ ತಿಳಿಯದಂತೆ ಇಬ್ಬರೊಂದಿಗೂ ಸಂಬಂಧ ಹೊಂದಿದ್ದು, ಬಾಲಕಿಯರ ಜೊತೆ ಖಾಸಗಿ ಫೋಟೊಗಳನ್ನು ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸುತ್ತಿದ್ದ. ಅಲ್ಲದೆ ಇಬ್ಬರಿಂದಲೂ 50 ಸಾವಿರ ರೂಪಾಯಿಯನ್ನು ಸುಲಿಗೆ ಮಾಡಿದ್ದ ಎನ್ನಲಾಗಿದೆ.

vtv vitla
vtv vitla

ಇನ್ನು ಪ್ರೇಮ್‌ಕುಮಾರ್ ಎಂಬಾತ ಇಬ್ಬರೊಂದಿಗೂ ಸಂಬಂಧ ಹೊಂದಿರುವುದು ತಿಳಿದಿದ್ದು, ಬಾಲಕಿಯರಿಬ್ಬರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಿತನಾಗಿದ್ದ ಅಶೋಕ್ ಎಂಬಾತನ ಸಹಾಯ ಕೇಳಿದ್ದಾರೆ ಮತ್ತು ತಾವು ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿದ್ದು, ಅಶೋಕ್ ನೀಡಿದ ಸಲಹೆ ಮೇರೆಗೆ ಬಾಲಕಿಯರು ಪ್ರೇಮ್‌ಕುಮಾರ್‌ಗೆ ಕರೆ ಮಾಡಿ ಶೋಲವರಮ್ ಟೋಲ್ ಪ್ಲಾಜಾ ಬಳಿ ಬರಲು ಹೇಳಿದ್ದಾರೆ. ಬಳಿಕ ಆತನನ್ನು ಅಪಹರಿಸಲಾಗಿದೆ.

ಬಾಲಕಿಯರಿಬ್ಬರೂ ಪ್ರೇಮ್‌ಕುಮಾರ್ ಬಳಿಯಿರುವ ಮೊಬೈಲ್ ಕಸಿದುಕೊಂಡು ಅದರಲ್ಲಿರುವ ಫೋಟೊಗಳನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಆದರೆ ಅಶೋಕ್ ಮತ್ತು ಅವನ ಸ್ನೇಹಿತರು ಪ್ರೇಮ್‌ಕುಮಾರ್‌ನನ್ನು ಅಪಹರಿಸಿ ಈಚಂಗಾಡು ಗ್ರಾಮಕ್ಕೆ ಕಲೆದೊಯ್ದು ಹತ್ಯೆ ಮಾಡಿದ್ದಾರೆ ಮತ್ತು ಅಲ್ಲಿಯೇ ಸಮಾಧಿ ಮಾಡಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!