Tuesday, April 30, 2024
spot_imgspot_img
spot_imgspot_img

ಗಂಡನಿಗೆ ಕೈಕೊಟ್ಟು ಪ್ರಿಯಕರನ ಜೊತೆ ಹೋದಾಕೆ ಕಬ್ಬಿನ ಗದ್ದೆಯಲ್ಲಿ ಶವವಾಗಿ ಪತ್ತೆ

- Advertisement -G L Acharya panikkar
- Advertisement -

ಹಾಸನ: ಪ್ರೇಯಸಿಯ ಶವವನ್ನು ಯಾರಿಗೂ ತಿಳಿಯದಂತೆ ಪ್ರೀಯಕರನೇ ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವ ಘಟನೆ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಕಾವ್ಯ (25) ಮೃತಪಟ್ಟ ಯುವತಿಯಾಗಿದ್ದು, ಆಕೆಯನ್ನು ಕೊಲೆ ಮಾಡಿ ಹೂತು ಹಾಕಿದ್ದಾನೆ ಎಂದು ಪ್ರಿಯಕರ ಅವಿನಾಶ್ ವಿರುದ್ಧ ಕಾವ್ಯ ಪೋಷಕರು ಆರೋಪಿಸಿದ್ದಾರೆ.

ಅರಕಲಗೂಡು ತಾಲೂಕಿನ, ಮುದ್ಲಾಪುರ ಗ್ರಾಮದ ಕಲ್ಪನಾ ಅವರ ಪುತ್ರಿ ಕಾವ್ಯ ಒಂದುವರೆ ವರ್ಷವಿರುವಾಗಲೇ ತಂದೆಯನ್ನು ಕಳೆದುಕೊಂಡಿದ್ದಳು. ನಂತರ ದೊಡ್ಡಮ್ಮನ ಮನೆಯಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡಿದ್ದಳು. ಬಿಬಿಎಂ ಓದಿದ್ದ ಕಾವ್ಯ ಅಕ್ಷಯ್‌ನನ್ನು ಪ್ರೀತಿಸಿ ವಿವಾಹವಾಗಿದ್ದಳು. ಈ ವಿಷಯವನ್ನು ತಾಯಿಯ ಬಳಿವೂ ಹೇಳಿರಲಿಲ್ಲ. ಮದುವೆಯಾದ ಕೆಲವೇ ತಿಂಗಳಲ್ಲಿ ಸಂಸಾರದಲ್ಲಿ ಹೊಂದಾಣಿಕೆ ಬಾರದ ಕಾರಣ ಪೊಲೀಸ್ ಠಾಣೆಗೆ ದೂರು ನೀಡಿ ಅಕ್ಷಯ್ ಜೊತೆ ವಿವಾಹ ಸಂಬಂಧ ಮುರಿದುಕೊಂಡಿದ್ದಳು. ಈ ವಿಚಾರವನ್ನು ಕೂಡ ತನ್ನ ತಾಯಿಯಿಂದ ಮುಚ್ಚಿಟ್ಟಿದ್ದಳು. ನಂತರ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸಕ್ಕೆ ಸೇರಿದ್ದಳು.

ಬೆಂಗಳೂರಿನಲ್ಲಿ ಕೆಲ ತಿಂಗಳುಗಳ ಕಾಲ ಕೆಲಸ ಮಾಡಿದ ಕಾವ್ಯ ನಂತರ ಹಾಸನಕ್ಕೆ ವಾಪಾಸಾಗಿದ್ದಳು. ಬಳಿಕ ಹೊಳೆನರಸೀಪುರ ತಾಲೂಕಿನ, ಪಾರಸನಹಳ್ಳಿ ಗ್ರಾಮದ ಅವಿನಾಶ್‌ನನ್ನು ಪ್ರೀತಿಸುತ್ತಿದ್ದಳು. ಕಳೆದ 2 ವರ್ಷಗಳಿಂದ ಅವಿನಾಶ್ ಮನೆಯಲ್ಲಿಯೇ ವಾಸವಿದ್ದ ಕಾವ್ಯ ತಾಯಿಯ ಬಳಿ ಬೆಂಗಳೂರಿನಲ್ಲೇ ಇರುವುದಾಗಿ ಹೇಳಿದ್ದಳು.

ಇದಾದ ಬಳಿಕ ಮಗಳು ಕಾಣೆಯಾಗಿರುವ ಬಗ್ಗೆ ಕಲ್ಪನಾ ಹೊಳೆನರಸೀಪುರ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅವಿನಾಶ್‌ನನ್ನು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಕಾವ್ಯಳ ಶವವನ್ನು ಕಬ್ಬಿನಗದ್ದೆಯಲ್ಲಿ ಹೂತು ಹಾಕಿರುವುದು ಬೆಳಕಿಗೆ ಬಂದಿದೆ. ಅವಿನಾಶ್ ಹಾಗೂ ಆತನ ಪೋಷಕರೇ ನನ್ನ ಮಗಳನ್ನು ಕೊಲೆ ಮಾಡಿ ಹೂತು ಹಾಕಿದ್ದಾರೆ ಎಂದು ಕಲ್ಪನಾ ಆರೋಪಿಸಿದ್ದಾರೆ.

ನವೆಂಬರ್ 25 ರಂದು ಕಾವ್ಯಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಪೊಲೀಸರು ಅವಿನಾಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳೆದ 18 ದಿನಗಳ ಹಿಂದೆ ರಾತ್ರಿ 12 ಗಂಟೆ ವೇಳೆಗೆ ಕಾವ್ಯಳ ಶವವನ್ನು ಹೊತ್ತೊಯ್ದು ಕಬ್ಬಿನ ಗದ್ದೆಯಲ್ಲಿ ಹೂತು ಹಾಕಿರುವುದಾಗಿ ಆರೋಪಿ ತಿಳಿಸಿದ್ದಾನೆ. ಕಾವ್ಯ ಶವವನ್ನು ಹೂತು ಹಾಕಿದ್ದ ಜಾಗವನ್ನು ಅವಿನಾಶ್ ತೋರಿಸಿದ್ದಾನೆ. ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕಾವ್ಯಳದ್ದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬರಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

- Advertisement -

Related news

error: Content is protected !!