Friday, May 3, 2024
spot_imgspot_img
spot_imgspot_img

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ದಚಿತ್ರಕ್ಕೆ ಅವಕಾಶವಿಲ್ಲ

- Advertisement -G L Acharya panikkar
- Advertisement -
vtv vitla

ನವದೆಹಲಿ: ಹದಿಮೂರು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಎಂಬಂತೆ ಹಾಲಿ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಈ ಬಾರಿ ರಾಜ್ಯದ ಸ್ತಬ್ದಚಿತ್ರ ಇರುವುದಿಲ್ಲ ಎನ್ನಲಾಗಿದ್ದು ಇದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸಂಸ್ಕೃತಿ, ಕಲೆ, ಬಿಂಬಿಸುವ ಸ್ತಬ್ಧ ಚಿತ್ರಗಳು ಪ್ರಮುಖ ಆಕರ್ಷಣೆಯಾಗಿದ್ದವು. ಈ ಬಾರಿ ರಾಜ್ಯದ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಿಸಿರುವುದು ವಿವಾದಕ್ಕೆಡೆ ಮಾಡಿಕೊಟ್ಟಿದೆ.

ಕರ್ನಾಟಕ ಎಂದಿನಂತೆ ಈ ಬಾರಿಯೂ ಸ್ತಬ್ಧಚಿತ್ರದಲ್ಲಿ ಉತ್ಕೃಷ್ಟ ಪ್ರದರ್ಶನವನ್ನೇ ನೀಡಿದೆ. ಸಾಲುಮರದ ತಿಮ್ಮಕ್ಕ, ಸೂಲಗಿತ್ತಿ ನರಸಮ್ಮ , ತುಳಸಿಗೌಡ ಹಾಲಕ್ಕಿ ಅವರ ಸಾಧನೆಯನ್ನು ಬಿಂಬಿಸುವ ಸ್ತಬ್ಧಚಿತ್ರಕ್ಕೆ ಆಯ್ಕೆ ಸಮಿತಿ ಸಮ್ಮತಿ ಸೂಚಿಸಿತ್ತಾದರೂ ಕೊನೆಯ ಸುತ್ತಿನ ಸಭೆಯಲ್ಲಿ ತಿರಸ್ಕೃತಗೊಂಡಿತು ಎಂದು ಮೂಲಗಳು ತಿಳಿಸಿವೆ.

ಕೇಂದ್ರ ಸರಕಾರ ಅನುಮತಿ ನಿರಾಕರಿಸಿರುವುದು ರಾಜ್ಯ ಬಿಜೆಪಿ ಸರಕಾರದ ನಿಷ್ಕ್ರಿಯತೆಗೆ ಸಾಕ್ಷಿ ಎಂದು ಕಾಂಗ್ರೆಸ್‌ ಟೀಕಿಸಿದೆ.

- Advertisement -

Related news

error: Content is protected !!