- Advertisement -
- Advertisement -

ಉಚಿತ ಪಡಿತರ ನೀಡುವ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನು ಮಾರ್ಚ್ 2022ರವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ.

ನವೆಂಬರ್ 30ರಂದು ಕೊನೆಗೊಳ್ಳಲಿದ್ದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ವಿಸ್ತರಿಸಲಾಗಿದ್ದು, ಈವರೆಗೆ ಸುಮಾರು 80 ಕೋಟಿ ಫಲಾನುಭವಿಗಳಿಗೆ ತಲಾ 5 ಕೆಜಿ ಆಹಾರ ಧಾನ್ಯಗಳನ್ನು ಉಚಿತವಾಗಿ ನೀಡಲಾಗಿದೆ ಎಂದು ಹೇಳಿದ್ದಾರೆ. 5ನೇ ಹಂತದ ಯೋಜನೆ ವಿಸ್ತರಣೆಯಲ್ಲಿ 163 ಮೆಟ್ರಿಕ್ ಟನ್ ಆಹಾರ ಸಾಮಾಗ್ರಿ ಹಂಚಿಕೆಯಾಗಲಿದೆ ಎಂದು ಅನುರಾಗ್ ಠಾಕೂರ್ ಹೇಳಿದ್ದಾರೆ.



- Advertisement -








