Saturday, April 27, 2024
spot_imgspot_img
spot_imgspot_img

ಗಾನಲೋಕದಿಂದ ಮರೆಯಾದ ಗಾನಕೋಗಿಲೆ; ಖ್ಯಾತ ಹಿನ್ನಲೆ ಗಾಯಕಿ ವಾಣಿ ಜಯರಾಂ ಇನ್ನಿಲ್ಲ..!!

- Advertisement -G L Acharya panikkar
- Advertisement -

ಚೆನ್ನೈ: ದಕ್ಷಿಣ ಭಾರತದ ಖ್ಯಾತ ಗಾಯಕಿ ವಾಣಿಜಯರಾಂ ನಿಧನರಾಗಿದ್ದಾರೆ. ಚೆನ್ನೈನಲ್ಲಿರುವ ತಮ್ಮ ಮನೆಯಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ವಾಣಿ ಜಯರಾಂ ಅವರಿಗೆ ಮೊನ್ನೆಯಷ್ಟೇ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ. ಆದರೆ 10 ಸಾವಿರಕ್ಕೂ ಹೆಚ್ಚು ಹಾಡುಗಳ ಮೂಲಕ ಜನರನ್ನು ರಂಜಿಸಿದ ಗಾಯಕಿ ನಿಗೂಢವಾಗಿ ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದಿ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿರುವ ವಾಣಿ ಜಯರಾಂ ನಿಧನಕ್ಕೆ ಚಿತ್ರರಂಗ ಗಣ್ಯರು ಆಘಾತ ವ್ಯಕ್ತಪಡಿಸಿದ್ದಾರೆ

ಚೆನ್ನೈ ಹಡ್ಡೊಸ್ ಮಾರ್ಗದಲ್ಲಿರುವ ತಮ್ಮ ನಿವಾಸದಲ್ಲಿ ವಾಣಿ ಜಯರಾಂ ಮೃತಪಟ್ಟಿದ್ದಾರೆ. ಮನೆಯಲ್ಲಿ ಆಯತಪ್ಪಿ ಬಿದ್ದಿರುವ ವಾಣಿ ಜಯರಾಂ ತಲೆಗೆ ತೀವ್ರವಾಗಿ ಗಾಯವಾಗಿತ್ತು. ಈ ಗಾಯದಿಂದ ವಾಣಿ ಜಯರಾಂ ಮೃತಪಟ್ಟಿದ್ದಾರೆ. 2018ರಲ್ಲಿ ಪತಿ ಹಾಗೂ ಉದ್ಯಮಿ ಜಯರಾಂ ನಿಧನರಾಗಿದ್ದರು.

ಹುಟ್ಟಿದ್ದು ತಮಿಳುನಾಡಿನ ವೆಲ್ಲೋರ್ ನಲ್ಲಿ. ಬಾಲ್ಯದಿಂದಲೇ ಸಂಗೀತ ಅಭ್ಯಾಸ ಮಾಡಿದ್ದ ಅವರು, ನಂತರ ಮದ್ರಾಸ್ ವಿವಿಯಲ್ಲಿ ಸ್ನಾತಕೋತ್ತರ ಪದವಿ ಪೂರೈಸಿದವರು. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲೂ ಕೆಲಸ ಮಾಡಿದರು. ಮದುವೆಯ ನಂತರ ಮತ್ತು ಮುಂಬೈನಲ್ಲಿ ಅವರು ನೆಲೆಯೂರಿ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದಲ್ಲಿ ತರಬೇತಿ ಪಡೆದರು.

ತಮಿಳು, ತೆಲಗು, ಕನ್ನಡ, ಮಲಯಾಳಂ, ಹಿಂದ, ಉರ್ದು, ಮರಾಟಿ, ಬೆಂಗಾಲಿ, ಬೋಜ್‌ಪುರಿ, ತುಳು ಮತ್ತು ಓಡಿಯಾ ಭಾಷೆಗಳಲ್ಲಿ ಹಾಡಿದ್ದಾರೆ. ತಮಿಳಿನಲ್ಲಿ ‘ಅಪೂರ್ವ ರಾಗಂಗಳ್’, ‘ತೆಲುಗಿನಲ್ಲಿ ಶಂಕರಾಭರಣಂ’, ‘ಸ್ವಾತಿ ಕಿರಣಂ’ ಚಿತ್ರಗಳಲ್ಲಿನ ಹಿನ್ನಲೆ ಗಾಯನಕ್ಕೆ ಈ ಗಾಯಕಿಗೆ ರಾಷ್ಟ್ರಪ್ರಶಸ್ತಿ, ಹಲವು ರಾಜ್ಯಗಳ ಶ್ರೇಷ್ಠ ಗಾಯಕಿ ಪ್ರಶಸ್ತಿ, ಸಂಗೀತ ಸಮ್ಮಾನ್, ಹಿಂದಿ ಭಾಷೆಯನ್ನೊಳಗೊಂಡಂತೆ ಹಲವು ಭಾಷೆಗಳ ಚಿತ್ರಗಳ ಗಾಯನಕ್ಕಾಗಿ ಫಿಲಂ ಫೇರ್ ಪ್ರಶಸ್ತಿ, ಪದ್ಮಭೂಷಣ ಹೀಗೆ ಹಲವು ಪುರಸ್ಕಾರಗಳು ವಾಣಿ ಜಯರಾಂ ಸಂದಿವೆ. ಈ ಪ್ರಶಸ್ತಿಗಳಲ್ಲಿ ಗುಜರಾಥ್, ಒರಿಸ್ಸಾ ರಾಜ್ಯಗಳ ಪ್ರಶಸ್ತಿಗಳೂ ಸೇರಿವೆ ಎಂದರೆ ವಾಣಿ ಜಯರಾಂ ಅವರಿಗಿರುವ ವ್ಯಾಪ್ತಿಯ ಅರಿವಾಗುತ್ತದೆ.

ಓ ಪ್ರಿಯತಮ , ಮುತ್ತೇ ಪ್ರಥಮ, ಇವ ಯಾವ ಸೀಮೆ ಗಂಡು, ಓ ನನ್ನ ಕರುಳ, ಚಿನ್ನ ಚಿನ್ನ ಬೇಡ ಚಿನ್ನ ಮುಂತಾದ ಜನಪ್ರಿಯ ಕನ್ನಡ ಹಾಡುಗಳ ಮೂಲಕ ಕನ್ನಡಿಗರ ಮನಗೆದ್ದಿದ್ದಾರೆ.

- Advertisement -

Related news

error: Content is protected !!