Saturday, June 13, 2026
spot_imgspot_img
spot_imgspot_img

ಗುಂಡಿಗೆ ಬಿದ್ದು ದ್ವಿಚಕ್ರ ವಾಹನ ಸ್ಕಿಡ್ – ಮಗಳನ್ನು ಕಾಲೇಜಿಗೆ ಕರೆದೊಯ್ಯುತ್ತಿದ್ದ ತಾಯಿ ಸಾವು

- Advertisement -
- Advertisement -

ಬೆಂಗಳೂರು: ಮಗಳನ್ನು ಕಾಲೇಜಿಗೆ ಬಿಡಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಮಹಿಳೆಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ವೈಟ್‌ಫೀಲ್ಡ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾರತ್ತಹಳ್ಳಿಯಿಂದ ಸಿದ್ದಾಪುರ ಕಡೆಗೆ ತಾಯಿ ಕಾಂತಾ ಹಾಗೂ ಮಗಳು ನೇಹಾ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಈ ವೇಳೆ ಮಳೆಯಿಂದಾಗಿ ರಸ್ತೆಯಲ್ಲಿದ್ದ ಗುಂಡಿಗೆ ವಾಹನ ಸ್ಕಿಡ್ ಆಗಿ ಇಬ್ಬರೂ ಕೆಳಗೆ ಬಿದ್ದಿದ್ದಾರೆ.

ಕೆಳಗೆ ಬಿದ್ದ ಕಾಂತಾ ಅವರ ಮೇಲೆ ಹಿಂದಿನಿಂದ ಬಂದ ಶಾಲಾ ಬಸ್ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡರು. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಲಾಯಿತಾದರೂ, ಕಾಂತಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ವೇಳೆ ಮಗಳು ನೇಹಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆ ಸಂಬಂಧ ವೈಟ್‌ಫೀಲ್ಡ್ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!