Wednesday, May 22, 2024
spot_imgspot_img
spot_imgspot_img

ಗುಜರಾತ್‌ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಪ್ರಮಾಣವಚನ ಸ್ವೀಕಾರ

- Advertisement -G L Acharya panikkar
- Advertisement -
vtv vitla

ಗಾಂಧಿನಗರ: ಗುಜರಾತ್‌ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 156 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ದಿಗ್ವಿಜಯ ಸಾಧಿಸಿತ್ತು. ಗುಜರಾತ್ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಭೂಪೇಂದ್ರ ಪಟೇಲ್ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಗಣ್ಯರ ಸಮ್ಮುಖದಲ್ಲಿ ಮಧ್ಯಾಹ್ನ 2 ಗಂಟೆಗೆ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇನ್ನು ಗುಜರಾತ್‌ನ 32ನೇ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಡಿಸೆಂಬರ್‌ 12ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯ ರಾಜಧಾನಿ ಗಾಂಧಿನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಆಚಾರ್ಯ ದೇವವ್ರತ್‌ ಪ್ರಮಾಣ ವಚನ ಭೋಧಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಾರಿಗೆ ಸಚಿವ ನಿತಿನ್‌ ಗಡ್ಕರಿ, ರಕ್ಷಣಾ ಸಚಿವ ರಾಜಣಾತ್‌ ಸಿಂಗ್‌, ಕಾರ್ಯಕಾರಿಣಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ, ಬಿ.ಎಲ್‌. ಸಂತೋಷ್‌, ಸಿಎಂಗಳಾದ ಬಸವರಾಜ್‌ ಬೊಮ್ಮಾಯಿ, ಏಕನಾಥ್‌ ಶಿಂಧೆ, ಹಿಮಾಂತ ಬಿಸ್ವಾಸ್‌ ಶರ್ಮಾ, ಮನೋಹರ್‌ ಲಾಲ್‌ ಖಟ್ಟರ್‌, ಶಿವರಾಜ್‌ ಸಿಂಗ್‌ ಚೌಹಾಣ್‌, ದೇವೇಂದ್ರ ಫಡ್ನವವೀಸ್‌ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!