Tuesday, September 1, 2026
spot_imgspot_img
spot_imgspot_img

ಗುಜರಿ ಗೋದಾಮಿನಲ್ಲಿ ಬೆಂಕಿ ಅವಘಢ; ಒಂದೇ ಕುಟುಂಬದ ನಾಲ್ವರು ಸಜೀವ ದಹನ

- Advertisement -
- Advertisement -
vtv vitla
vtv vitla

ಯಮುನಾನಗರ: ಯಮುನಾನಗರ ಜಿಲ್ಲೆಯಲ್ಲಿರುವ ಗುಜರಿ ಗೋದಾಮಿನಲ್ಲಿ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ ನಾಲ್ವರು ಸಜೀವ ದಹನವಾಗಿರುವ ಘಟನೆ ನಡೆದಿದೆ.

ಗುಜರಿ ಸಾಮಗ್ರಿಗಳನ್ನು ಸಂಗ್ರಹಿಸಲಾಗುತ್ತಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಕೆಲಸ ಮಾಡುತ್ತಿದ್ದ ಕುಟುಂಬಗಳ ಮನೆಗಳಿಗೂ ಬೆಂಕಿ ಆವರಿಸಿಕೊಂಡಿದೆ.

ಇನ್ನು ಈ ಘಟನೆಯಲ್ಲಿ ತಂದೆ ಮತ್ತು ಮೂವರು ಮಕ್ಕಳು ಸಜಿವ ದಹನವಾಗಿದ್ದು, ಅನೇಕ ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಕಿಯನ್ನು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ನಂದಿಸಲು ಹರಸಾಹಸ ಪಟ್ಟು ಒಳಗೆ ಸಿಲುಕಿದ್ದ 17 ಕಾರ್ಮಿಕರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

vtv vitla
vtv vitla
- Advertisement -

Related news

error: Content is protected !!