Friday, April 19, 2024
spot_imgspot_img
spot_imgspot_img

ಗೃಹ ಸಚಿವ ಆರಗ ಜ್ಞಾನೇಂದ್ರ ನಿವಾಸಕ್ಕೆ ನುಗ್ಗಲು ಎಬಿವಿಪಿ ಕಾರ್ಯಕರ್ತರ ಯತ್ನ: ಪೊಲೀಸರ ಲಾಠಿಪ್ರಹಾರ

- Advertisement -G L Acharya panikkar
- Advertisement -

ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಸದಸ್ಯರು ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಹಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ಪ್ರತಿಭಟನೆ ಉಗ್ರ ಸ್ವರೂಪ ಪಡೆದಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲಾಗಿದೆ.

ಅಂದು ಹರ್ಷ..ಇಂದು ಪ್ರವೀಣ..ನಾಳೆ ನಾವು ಎಂದು ಕಾರ್ಯಕರ್ತರು ಆಕ್ರೋಶ

ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಹೈಡ್ರಾಮಾ ನಡೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಜಯಮಹಲ್ ನಲ್ಲಿರುವ ನಿವಾಸಕ್ಕೆ ಎಬಿವಿಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ನುಗ್ಗಲು ಯತ್ನಿಸುವಾಗ ಪೊಲೀಸರು ಲಾಠಿಚಾರ್ಜ್ ಮಾಡಿ ಹರಸಾಹಸಪಟ್ಟು ತಡೆದ ಘಟನೆ ನಡೆದಿದೆ.

ರಾಜ್ಯ ಸರ್ಕಾರದ ವಿರುದ್ಧ ಇತ್ತೀಚೆಗೆ ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಸರ್ಕಾರದ ಗಮನ ಸೆಳೆಯಲು ಎಬಿವಿಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಗೃಹ ಸಚಿವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಗೃಹ ಸಚಿವರ ನಿವಾಸ ಮುಂದೆ ಪ್ರತಿಭಟನೆ ನಡೆಸಲು ಬಿಡಲಿಲ್ಲ.

ಆಗ ಕಾರ್ಯಕರ್ತರು ಗೃಹ ಸಚಿವರ ಗೇಟ್ ತಳ್ಳಿ ಒಳಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ ಘಟನೆಯೂ ನಡೆಯಿತು. ಪ್ರವೀಣ್​​​ ನೆಟ್ಟಾರ್​​​​​ ಹತ್ಯೆ ಖಂಡಿಸಿ ಗೃಹ ಸಚಿವರ ಮನೆಗೆ ಮುತ್ತಿಗೆ ಹಾಕಿದ್ದು, ಬಿಜೆಪಿ ಸರ್ಕಾರ ಇದ್ದರೂ ಹಿಂದುತ್ವ ವಾದಿಗಳ ಹತ್ಯೆ ಆಗ್ತಿದೆ, ಹಿಂದುತ್ವ ವಾದಿಗಳ ರಕ್ಷಣೆ ಮಾಡದ ಸರ್ಕಾರಕ್ಕೆ ಧಿಕ್ಕಾರ, ಅಂದು ಹರ್ಷ..ಇಂದು ಪ್ರವೀಣ..ನಾಳೆ ನಾವು ಎಂದು ಕಾರ್ಯಕರ್ತರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಗೃಹ ಸಚಿವ ಆರಗ ಜ್ಞಾನೇಂದ್ರ ರಾಜೀನಾಮೆಗೆ ಹಿಂದೂಪರ ಸಂಘಟನೆಗಳು ಒತ್ತಾಯಿಸುತ್ತಿದ್ದಾರೆ. ಸದ್ಯ ಬೆಂಗಳೂರಿನ ಜಯಮಹಲ್ ನಲ್ಲಿ ಗೃಹ ಸಚಿವರ ಮನೆ ಮುಂದೆ ಪರಿಸ್ಥಿತಿ ಬಿಗಡಾಯಿಸಿದೆ. ಹಲವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಸ್ಥಳದಿಂದ ಬೇರೆಡೆಗೆ ಕರೆದೊಯ್ದಿದ್ದಾರೆ.

- Advertisement -

Related news

error: Content is protected !!