Tuesday, June 23, 2026
spot_imgspot_img
spot_imgspot_img

ಗ್ಯಾಂಗ್‌ರೇಪ್‌ ಸಂತ್ರಸ್ಥೆ ಕೇಸ್‌ ದಾಖಲಿಸಲು ಬಂದಾಗ ಪೊಲೀಸ್ ಅಧಿಕಾರಿಯಿಂದಲೇ ಮತ್ತೆ ಅತ್ಯಾಚಾರ

- Advertisement -
- Advertisement -

ಉತ್ತರ ಪ್ರದೇಶ: ಅತ್ಯಾಚಾರ ಕೇಸ್ ದಾಖಲಿಸಲು ಬಂದ ಬಾಲಕಿ ಮೇಲೆ ಪೊಲೀಸ್ ಅಧಿಕಾರಿಯೇ ಅತ್ಯಾಚಾರ ಎಸಗಿರುವ ಆಘಾತಕಾರಿ ಪ್ರಕರಣ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಸುಮಾರ 13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಠಾಣಾಧಿಕಾರಿ (ಎಸ್‌ಎಚ್‌ಒ) ಸೇರಿದಂತೆ ಆರು ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ನಾಲ್ವರು ಯುವಕರು ಆಮಿಷವೊಡ್ಡಿ ಅಪ್ರಾಪ್ತೆಯನ್ನು ಏಪ್ರಿಲ್ 22 ರಂದು ಭೋಪಾಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಸಂತ್ರಸ್ಥೆ ಹೇಗಾದರೂ ತಪ್ಪಿಸಿಕೊಂಡು ಆಕೆಯ ಮನೆಗೆ ತಲುಪಿದ್ದಳು.ಬಳಿಕ ದೂರು ದಾಖಲಿಸಲು ಠಾಣೆಗೆ ಹೋಗಿದ್ದಳು. ಅಲ್ಲಿ ಠಾಣೆಯ ಪ್ರಭಾರಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಬಳಿಕ ಆಕೆಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಿದ್ದಾನೆ ಎಂದು ವರದಿಯಾಗಿದೆ. ಮಕ್ಕಳ ಕಲ್ಯಾಣ ಸಮಿತಿಯವರು ಬಾಲಕಿಯನ್ನು ವಿಚಾರಣೆ ನಡೆಸಿದಾಗ, ಆಕೆಯ ನಡೆದಿರುವ ವಿಚಾರ ಬಾಯಿಬಿಟ್ಟಿದ್ದಾಳೆ. ಸದ್ಯ, ಆರೋಪಿ ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಿ ತನಿಖೆಗೆ ಆದೇಶಿಸಲಾಗಿದೆ.

- Advertisement -

Related news

error: Content is protected !!