Tuesday, March 19, 2024
spot_imgspot_img
spot_imgspot_img

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ ; 7 ಮಂದಿ ಕಾರ್ಮಿಕರು ಸಾವು

- Advertisement -G L Acharya panikkar
- Advertisement -
vtv vitla

ಗ್ಯಾಸ್‌ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿ 8 ಮಂದಿ ಕಾರ್ಮಿಕರಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ. ಓರ್ವ ಕಾರ್ಮಿಕ ಸಾವು ಬದುಕಿನ ನಡುವೆ ಹೋರಾಡೆಸುತ್ತಿದ್ದಾನೆ.

ಬಿಹಾರ ಮತ್ತುಉತ್ತರಪ್ರದೇಶ ನಿವಾಸಿಗರು ಸನೋಜ್ ಶರ್ಮಾ ಅಕಾ ಸನೋದ್, ಅಮಿತ್ ಕುಮಾರ್ ಮಂಡಲ್, ಚಂದ್ರ ಪಾಲ್, ತಿಲಕ್ ರಾಮ್, ನೀರಜ್ ಭಾರತಿ, ಲಕ್ಷ್ಮಣ ಮತ್ತು ಸುಮಯಾ ಗುಪ್ತಾ ಅಲಿಯಾಸ್ ಸಮಯ್ ಮೃತಪಟ್ಟ ವ್ಯಕ್ತಿಗಳು.

ನಿಕುನ್ ಅನ್ಸಾರಿ ಎಂಬಾತ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಮೇಡಹಳ್ಳಿಯ ಶೆಡ್ ಮನೆಯೊಂದರಲ್ಲಿ ಡ್ಯಾಮೇಜ್ ಆಗಿದ್ದ ಪೈಪ್‌ನಿಂದ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅನಾಹುತ ನಡೆದಿದ್ದು, ಗಾಯಗೊಂಡಿದ್ದ ಎಂಟು ಮಂದಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ 7 ಮಂದಿ ಕಾರ್ಮಿಕರು ಚಿಕಿತ್ಸೆ ಪಲಾಕಾರಿಯಾದೆ ಸಾವನ್ನಪ್ಪಿದ್ದಾರೆ.

ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್, ’ಸುರಕ್ಷತಾ ಕ್ರಮಗಳಿಲ್ಲದೆ ಅನೇಕ ಕಾರ್ಮಿಕರನ್ನು ಸಣ್ಣ ಕೋಣೆಯಲ್ಲಿ ಉಳಿಯಲು ಅನುಮತಿಸಿದ ಕಟ್ಟಡದ ಮಾಲೀಕ ಭಾಸ್ಕರ್ ಹಾಗೂ ಗುತ್ತಿಗೆದಾರ ಗುಪ್ತಾ ಅವರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!