Saturday, May 18, 2024
spot_imgspot_img
spot_imgspot_img

ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರ ಗೌರವಧನ ದ್ವಿಗುಣ

- Advertisement -G L Acharya panikkar
- Advertisement -

ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣ ಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಈ ವರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ., ಉಪಾಧ್ಯಕ್ಷರು 2 ಸಾವಿರ ರೂ ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನ ನೀಡಲಾಗುತ್ತಿತ್ತು.

ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ., ಉಪಾಧ್ಯಕ್ಷರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವ ಧನ ನಿಗದಿ ಪಡಿಸಿ ಸರ್ಕಾರಿ ಆದೇಶ ಹೊರಡಿಸಲಾಗಿದೆ.

ಹಲವು ವರ್ಷಗಳಿಂದ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನ ಹೆಚ್ಚಳ ಮಾಡುವ ಬೇಡಿಕೆ ಇದೀಗ ಕೈಗೂಡಿದೆ.

- Advertisement -

Related news

error: Content is protected !!