Friday, June 19, 2026
spot_imgspot_img
spot_imgspot_img

ಚಕ್ರ ಸ್ಪೋಟಗೊಂಡು ಖಾಸಗಿ ಬಸ್‌ ಸಂಪೂರ್ಣ ಭಸ್ಮ; ಪ್ರಯಾಣಿಕರು ಸೇಫ್‌

- Advertisement -
- Advertisement -

ಹುಬ್ಬಳ್ಳಿ: ಖಾಸಗಿ ಬಸ್‌ನ ಹಿಂಬದಿ ಚಕ್ರ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಕಾರವಾರ ರಸ್ತೆಯ ಟೋಲ್‌ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದಾಗಿ ಬಸ್‌ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

30ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತ ರೇಷ್ಮಾ ಟ್ರಾವೆಲ್ಸ್ ಕಂಪನಿಗೆ ಸೇರಿದ ಖಾಸಗಿ ಟ್ರಾವೆಲ್ಸ್ ಪೂನಾದಿಂದ ಉಡುಪಿಗೆ ತೆರಳುತ್ತಿದ್ದ ವೇಳೆ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ಬಸ್‌ನ ಹಿಂಬದಿ ಚಕ್ರ ಸ್ಪೋಟಗೊಂಡಿದೆ. ಇದರಿಂದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ಅಪಾಯದ ಮುನ್ಸೂಚನೆ ಅರಿತ ಚಾಲಕ ಕೂಡಲೇ ಬಸ್‌ನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ. ಇದರಿಂದಾಗಿ ಸಂಭಾವ್ಯ ಅಪಾಯ ತಪ್ಪಿದಂತಾಗಿದೆ.

ಪ್ರಯಾಣಿಕರು ಇಳಿಯುತ್ತಿದ್ದಂತೆ ಬಸ್ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬಂದಿ ಸ್ಥಳಕ್ಕಾಗಮಿಸಿ ಜಲಫಿರಂಗಿ ವಾಹನಗಳ ಮೂಲಕ ಬೆಂಕಿ ನಂದಿಸಿದ್ದಾರೆ. ಹಳೇಹುಬ್ಬಳ್ಳಿ ಠಾಣೆ ಪೋಲಿಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!