Friday, March 29, 2024
spot_imgspot_img
spot_imgspot_img

ಚಪ್ಪಲಿಯಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ – ವ್ಯಕ್ತಿ ಬಂಧನ

- Advertisement -G L Acharya panikkar
- Advertisement -

ವ್ಯಕ್ತಿಯೊಬ್ಬ ಚಪ್ಪಲಿಯಲ್ಲಿ 1.2 ಕೆ.ಜಿ ತೂಕದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಇಂಡಿಗೋ ವಿಮಾನದಲ್ಲಿ ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನನ್ನು ಕಸ್ಟಮ್ಸ್ ಏರ್ ಇಂಟೆಲಿಜೆನ್ಸ್ ಅಧಿಕಾರಿಗಳು ತಡೆದಿದ್ದು, ಆತನ ಬಳಿ ಪ್ರಯಾಣದ ಉದ್ದೇಶವನ್ನು ಕೇಳಿದಾಗ ಆತ ವೈದ್ಯಕೀಯ ಉದ್ದೇಶಕ್ಕೆ ಪ್ರಯಾಣಿಸುತ್ತಿರುವುದಾಗಿ ತಿಳಿಸಿರುತ್ತಾನೆ. ಈ ವ್ಯಕ್ತಿ ಯಾವುದೇ ವೈದ್ಯಕೀಯ ದಾಖಲೆಗಳನ್ನು ನೀಡದಿರುವುದನ್ನು ಕಂಡು ಅನುಮಾನಗೊಂಡ ಅಧಿಕಾರಿಗಳು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಆತನ ಚಪ್ಪಲಿಯಲ್ಲಿ ಗುಳಿಗಳನ್ನು ರಚಿಸಿ, ಚಿನ್ನದ ಗಟ್ಟಿಗಳನ್ನು ಅಡಗಿಸಿಟ್ಟಿರುವುದು ಕಂಡುಬಂದಿದೆ. ಅಧಿಕಾರಿಗಳು ಒಂದು ಜೊತೆ ಚಪ್ಪಲಿಯಲ್ಲಿ ಒಟ್ಟು 4 ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡರು.

ಚಪ್ಪಲಿಯಲ್ಲಿ ಚಿನ್ನವನ್ನು ಬಚ್ಚಿಟ್ಟಿದ್ದನ್ನು ಕಂಡು ಕಸ್ಟಮ್ಸ್ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ! ಇಂತಹ ಉಪಾಯಗಳನ್ನು ಬಳಸಿ ಮತ್ತೆ ಕಳ್ಳಸಾಗಣೆ ನಡೆಯದಂತೆ ಅಧಿಕಾರಿಗಳು ವಿಮಾನದಲ್ಲಿ ಪ್ರಯಾಣಿಸುವವರ ಚಪ್ಪಲಿಗಳನ್ನು ಅತ್ಯಂತ ಜಾಗರೂಕರಾಗಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!