Monday, August 31, 2026
spot_imgspot_img
spot_imgspot_img

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಬಸ್; 7 ಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ..!

- Advertisement -
- Advertisement -

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದು 7 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ನಡೆದಿದೆ.

ದತ್ತಪೀಠದಿಂದ ಬರುತ್ತಿದ್ದ ಖಾಸಗಿ ಬಸ್ ಅತ್ತಿಗುಂಡಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ ಎಂದು ತಿಳಿದು ಬಂದಿದೆ.ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla

vtv vitla
vtv vitla
- Advertisement -

Related news

error: Content is protected !!