Sunday, May 5, 2024
spot_imgspot_img
spot_imgspot_img

ಚಿಕ್ಕಮಗಳೂರು: ದತ್ತ ಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿದ ದುಷ್ಕರ್ಮಿಗಳ ಬಂಧನ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮದ ವೇಳೆ ದತ್ತಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿ ದೊಡ್ಡ ಮಟ್ಟದ ಕುಕೃತ್ಯಕ್ಕೆ ಮುಂದಾಗಿದ್ದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳು. ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳಾಗಿದ್ದು, ಈ ರಸ್ತೆಯಲ್ಲಿ ಸಾಗುವ ವಾಹನಗಳನ್ನು ಪಂಚರ್‌ ಮಾಡುವ ಉದ್ದೇಶದಿಂದ ಮತ್ತು ನಡೆಯುವವರ ಕಾಲಿಗೆ ಚುಚ್ಚಲಿ ಎನ್ನುವ ಉದ್ದೇಶದಿಂದ ಈ ರೀತಿ ಮಾಡಿದ್ದರು ಎಂದು ಪ್ರಾಥಮಿಕ ವಿಚಾರಣೆಯ ವೇಳೆ ತಿಳಿದುಬಂದಿದೆ. ಈ ಪ್ರಕರಣ ನಡೆಯುತ್ತಿದ್ದಂತೆಯೇ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ತನಿಖೆ ಆರಂಭಿಸಿದ್ದರು, ಹಲವು ತಂಡಗಳಾಗಿ ದುಷ್ಕೃತ್ಯದ ಸೂತ್ರಧಾರರ ಪತ್ತೆಗೆ ಮುಂದಾಗಿದ್ದರು. ಈಗ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ.

ದತ್ತ ಜಯಂತಿಯ ಮೊದಲ ದಿನ ಅನಸೂಯಾ ಸಂಕೀರ್ತನೆ ದಿನ ಪೀಠಕ್ಕೆ ಹೋಗುವ ದಾರಿಯಲ್ಲಿ ಮೊಳೆಗಳನ್ನು ಚೆಲ್ಲಲಾಗಿತ್ತು. ಈ ರೀತಿ ಮೊಳೆ ಚೆಲ್ಲಿದ್ದರಿಂದ ಪೊಲೀಸ್ ಸೇರಿದಂತೆ ನಾಲ್ಕೈದು ವಾಹಗಳು ಪಂಚರ್ ಆಗಿ ರಸ್ತೆ ಮಧ್ಯೆ ನಿಂತಿದ್ದವು. ದುಷ್ಕರ್ಮಿಗಳು ಚಿಕ್ಕಮಗಳೂರಿನ ಹಾರ್ಡ್‍ವೇರ್ ಶಾಪ್‍ನಲ್ಲಿ 4 ಕೆ.ಜಿ. ಮೊಳೆಗಳನ್ನು ಖರೀದಿಸಿ ಆಯಕಟ್ಟಿನ ಜಾಗದಲ್ಲಿ ಚೆಲ್ಲಿದ್ದರು.

ಈ ಪ್ರಕರಣದಲ್ಲಿ ಇನ್ನೂ ಹಲವರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಗ್ರಾಮಾಂತರ ಪೊಲೀಸರು ಬಲೆ ಬೀಸಿದ್ದಾರೆ. ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ವಿಶೇಷ ತಂಡಗಳ ರಚನೆ ಮಾಡಲಾಗಿದೆ.

- Advertisement -

Related news

error: Content is protected !!