Friday, June 5, 2026
spot_imgspot_img
spot_imgspot_img

ಚಿಕ್ಕಮಗಳೂರು: ಶಾಲೆಯಲ್ಲಿ ಕೊರೊನಾ ಸ್ಫೋಟ; ವಿದ್ಯಾರ್ಥಿಗಳು ಸೇರಿ 40 ಮಂದಿಗೆ ಸೋಂಕು.!

- Advertisement -
- Advertisement -

vtv vitla
vtv vitla

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಸಿಗೋಡಿನಲ್ಲಿರುವ ನವೋದಯ ವಿದ್ಯಾಲಯದಲ್ಲಿ ಕೊರೊನಾ ಅಟ್ಟಹಾಸ ಮೆರೆದಿದೆ. ವಿದ್ಯಾರ್ಥಿಗಳು ಸೇರಿ ಶಾಲೆಯ 40 ಮಂದಿಗೆ ಕೊರೊನಾ ಕಾಣಿಸಿಕೊಂಡಿದೆ.

ಸಿಗೋಡು ಜವಾಹರಲಾಲ್ ನವೋದಯ ವಿದ್ಯಾಲಯದಲ್ಲಿ ಸೋಂಕು ಪತ್ತೆಯಾಗಿದ್ದು, ಶಾಲೆಯನ್ನ ಸಂಪೂರ್ಣ ಸೀಲ್​ಡೌನ್ ಮಾಡಲಾಗಿದೆ. ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ ಸುಮಾರು 418 ಮಂದಿಯನ್ನ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಇದರಲ್ಲಿ 40 ಮಂದಿಗೆ ಕೊರೊನಾ ದಾಳಿ ಮಾಡಿದೆ. ಸದ್ಯ ಶಾಲೆಗೆ ಡಿ.ಹೆಚ್.ಓ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರಂಭದಲ್ಲಿ ಮೂವರು ವಿದ್ಯಾರ್ಥಿಗಳು ಹಾಗೂ ನಾಲ್ಕು ಮಂದಿ ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿತ್ತು. ವಸತಿ ಶಾಲೆಗೆ ಆರೋಗ್ಯ ಸಿಬ್ಬಂದಿ ನೇಮಕ ಮಾಡಲಾಗಿದೆ. ಪತ್ತೆಯಾದವರಲ್ಲಿ ಯಾವುದೇ ರೋಗದ ಲಕ್ಷಣಗಳಿಲ್ಲ. ಹೀಗಾಗಿ ಜಿಲ್ಲಾಡಳಿತ ವಸತಿ ಶಾಲೆಯಲ್ಲಿಯೇ ಎಲ್ಲರಿಗೂ ಕ್ವಾರಂಟೀನ್ ಮಾಡಿಸಿದೆ.

vtv vitla

- Advertisement -

Related news

error: Content is protected !!