Wednesday, July 22, 2026
spot_imgspot_img
spot_imgspot_img

ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆಗೆ ಆಗ್ರಹಿಸಿ ಇಂದು ಶೃಂಗೇರಿ ಬಂದ್ !

- Advertisement -
- Advertisement -

ಚಿಕ್ಕಮಗಳೂರು: ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ ಆಗ್ರಹಿಸಿ ಶೃಂಗೇರಿ ಬಂದ್ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸ್ಥಳೀಯ ಸಂಘಟನೆಗಳು 100 ಬೆಡ್ ಗಳ ಸುಸಜ್ಜಿತ ಆಸ್ಪತ್ರೆ ನಿರ್ಮಿಸುವಂತೆ ಆಗ್ರಹಿಸಿವೆ. ಆಡಳಿತದ ಮೇಲೆ ಒತ್ತಡ ಹೇರುವ ಉದ್ದೇಶದಿಂದಲೇ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಸ್ವಯಂಪ್ರೇರಿತ ಶೃಂಗೇರಿ ಬಂದ್ ನಡೆಸಲು ವಿನಂತಿಸಲಾಗಿದೆ. ಪ್ರವಾಸಿಗರು, ಭಕ್ತರು ಶೃಂಗೇರಿಗೆ ಬರಬಾರದು ಎಂದು ಮನವಿ ಮಾಡಲಾಗಿದೆ.

ಕಳೆದ 14 ವರ್ಷಗಳಿಂದ ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಸ್ಥಾಪನೆಗಾಗಿ ಜನರು ಆಗ್ರಹಿಸುತ್ತಲೇ ಇದ್ದಾರೆ. ಸೂಕ್ತ ಚಿಕಿತ್ಸೆ ಸಿಗದೆ ಜನರು ಪರದಾಡುತ್ತಿದ್ದಾರೆ. ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಇಂದು ಸ್ವಯಂಪ್ರೇರಿತ ಶೃಂಗೇರಿ ಬಂದ್ ಗೆ ಕರೆ ನೀಡಲಾಗಿದೆ.

ನೂರು ಬೆಡ್ ಆಸ್ಪತ್ರೆ ಹೋರಾಟ ಸಮಿತಿ ಈ ಬಂದ್ ಗೆ ಕರೆ ನೀಡಿದೆ. 14 ವರ್ಷಗಳಿಂದ ಸುಸಜ್ಜಿತ ಆಸ್ಪತ್ರೆಗೆ ಶೃಂಗೇರಿಯಲ್ಲಿ ಕೇಳಿ ಬರುತ್ತಲೇ ಇದೆ. ಶೃಂಗೇರಿಯಲ್ಲಿ ಸೂಕ್ತ ಚಿಕಿತ್ಸೆ ದೊರೆಯದೆ ಈ ಹಿಂದೆ ಸಾಕಷ್ಟು ಜನರು ಸಾವನ್ನಪ್ಪಿದ್ದಾರೆ. ಉತ್ತಮ ಚಿಕಿತ್ಸೆಗಾಗಿ ಶೃಂಗೇರಿ ಜನರು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳನ್ನು ಅವಲಂಬಿಸಿದ್ದಾರೆ. ಶೃಂಗೇರಿಯಲ್ಲಿ ಉತ್ತಮ ಆಸ್ಪತ್ರೆ ಸ್ಥಾಪಿಸಬೇಕು ಎಂದು ಆಗ್ರಹಿಸಲೆಂದು ಜನರು ಸ್ವಯಂಪ್ರೇರಿತ ಶೃಂಗೇರಿ ಬಂದ್ ಗೆ ಕರೆ ನೀಡಿದ್ದಾರೆ.

- Advertisement -

Related news

error: Content is protected !!