Saturday, June 6, 2026
spot_imgspot_img
spot_imgspot_img

ಚಿರತೆ ದಾಳಿಯಿಂದ ಯುವತಿ ಮೃತ್ಯು

- Advertisement -
- Advertisement -

ಮೈಸೂರು: ಮನೆಯ ಮುಂದೆ ಕುಳಿತಿದ್ದ ಯುವತಿ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ನಡೆದಿದೆ.

ರಮೇಶ್ ಎಂಬವರ ಪುತ್ರಿ ಮೇಘನಾ (22)ಚಿರತೆ ದಾಳಿಗೆ ಬಲಿಯಾದ ಯುವತಿ. ಈಕೆ ಪಟ್ಟಣದ ಸರ್ಕಾರಿ ಮಹಿಳಾ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಮೇಘನಾ ನಿನ್ನೆ ಸಂಜೆ ಮನೆ ಮುಂದೆ ಕುಳಿತಿದ್ದಾಗ ಚಿರತೆ ದಾಳಿ ಮಾಡಿತ್ತು. ತೀವ್ರವಾಗಿ ಗಾಯಗೊಂಡಿದ್ದ ಮೇಘನಾಳನ್ನು ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದ್ರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ.

ಟಿ.ನರಸೀಪುರ ತಾಲೂಕಿನಲ್ಲೇ ಚಿರತೆ ದಾಳಿಗೆ ಎರಡನೇ ಬಲಿಯಾಗಿದೆ. ಇದರಿಂದ ಜನರು‌ ಮನೆಯಿಂದ ಹೊರ ಬರಲು ಹೆದರುವಂತಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಎಸ್.ಕೆಬ್ಬೆಹುಂಡಿ ಗ್ರಾಮಸ್ಥರು, ಕೂಡಲೇ ಚಿರತೆ ಸೆರೆಹಿಡಿದು ಸ್ಥಳಾಂತರ ಮಾಡುವಂತೆ ಮೈಸೂರು ಜಿಲ್ಲಾಡಳಿತಕ್ಕೆ ಆಗ್ರಹಿಸಿದ್ದಾರೆ.

- Advertisement -

Related news

error: Content is protected !!