Tuesday, June 23, 2026
spot_imgspot_img
spot_imgspot_img

ಚಿರತೆ ದಾಳಿ; ಒಂದೂವರೆ ವರ್ಷದ ಬಾಲಕಿ ಮೃತ್ಯು

- Advertisement -
- Advertisement -

ಮುಂಬೈ: ಚಿರತೆ ದಾಳಿಗೆ ಒಂದೂವರೆ ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಮುಂಬೈನ ಪಶ್ಚಿಮ ಉಪನಗರವಾದ ಗೋರೆಗಾಂವ್‌ನ ಆರೆ ಕಾಲೋನಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬಾಲಕಿಯು ತನ್ನ ತಾಯಿಯೊಂದಿಗೆ ದೇವಸ್ಥಾನಕ್ಕೆ ತೆರಳುತ್ತಿದ್ದು, ಈ ವೇಳೆ ಏಕಾಏಕಿ ಚಿರತೆ ಮಗುವಿನ ಮೇಲೆ ದಾಳಿ ಮಾಡಿ ಗಾಯಗೊಳಿಸಿದ್ದು, ಗಾಯಗೊಂಡ ಬಾಲಕಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ.

ಇನ್ನು ಪ್ರಾಥಮಿಕ ಮಾಹಿತಿಯ ಆಧಾರದ ಮೇಲೆ ನಾವು ಪ್ರಕರಣದಲ್ಲಿ ಆಕಸ್ಮಿಕ ಸಾವಿನ ವರದಿ ಅನ್ನು ದಾಖಲಿಸಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!