Sunday, May 19, 2024
spot_imgspot_img
spot_imgspot_img

ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ; ಮಾನಹಾನಿ, ಚಾರಿತ್ರ್ಯಹರಣ, ಸುಳ್ಳು ಸುದ್ದಿ, ಅಶ್ಲೀಲ ಪೋಸ್ಟ್‌ಗಳನ್ನು ಹಾಕುವ ಮುನ್ನ ಎಚ್ಚರ- ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು “Social Media Monitoring Cell”

- Advertisement -G L Acharya panikkar
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆ – 2023ಕ್ಕೆ ಸಂಬಂಧಿಸಿದಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮಾತೆ ವಿಕ್ರಮ್ ಪ್ರಕಟಣೆ ಹೊರಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಜಿಲ್ಲಾ ಚುನಾವಣಾಧಿಕಾರಿಗಳ ಕಛೇರಿಯಲ್ಲಿ ಜಿಲ್ಲಾ ಪೊಲೀಸ್‌ ಕಛೇರಿಯಲ್ಲಿ ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಧೀಕ್ಷಕರುಗಳ ಕಛೇರಿಗಳಲ್ಲಿ Social Media Monitoring Cell ಕಾರ್ಯನಿರ್ವಹಿಸುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹಾಕುವ ಎಲ್ಲಾ ರೀತಿಯ ಪೋಸ್ಟ್ ಗಳ ಮೇಲೆ ನಿಗಾ ಇರಿಸಿ ಪರಿಶೀಲಿಸುತ್ತಿದ್ದು, ಸಾರ್ವಜನಿಕರು ವಿವೇಕದಿಂದ ವರ್ತಿಸುವುದು ಕಡ್ಡಾಯ ಎಂದು ಎಚರಿಕೆ ನೀಡಲಾಗಿದೆ.

  1. ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
  2. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
  3. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
  4. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ರೀತಿಯ ಅಶ್ಲೀಲ, ಅಸಭ್ಯ ವಿಷಯಗಳನ್ನು ಒಳಗೊಂಡ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
  5. ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚಾರಿತ್ರ್ಯಹರಣ ಹಾಗೂ ಮಾನಹಾನಿ ಉಂಟಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ.
- Advertisement -

Related news

error: Content is protected !!