Friday, May 10, 2024
spot_imgspot_img
spot_imgspot_img

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ

- Advertisement -G L Acharya panikkar
- Advertisement -
vtv vitla

ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ನಡೆಯುತ್ತಿರುವಾಗಲೇ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಬರೆದ ಪತ್ರದಲ್ಲಿ ಕೆಎಸ್ ಈಶ್ವರಪ್ಪ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ.

ನಾನು ಸ್ವ-ಇಚ್ಚೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ಬಯಸುತ್ತಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೂ ಪರಿಗಣಿಸಬಾರದಾಗಿ ವಿನಂತಿಸುತ್ತೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದ ಅವರು ದಿಢೀರ್ ಈ ನಿರ್ಧಾರ ಘೋಷಿಸಿರುವುದು ಅಭಿಮಾನಿಗಳ ಅಚ್ಚರಿಗೆ ಕಾರಣವಾಗಿದೆ.

- Advertisement -

Related news

error: Content is protected !!