Sunday, July 19, 2026
spot_imgspot_img
spot_imgspot_img

ಜನಪ್ರಿಯ ಗಾಯಕನ ಕಾರ್ಯಕ್ರಮಕ್ಕೆ ಮಿತಿಮೀರಿ ಬಂದ ಜನಸಾಗರ- ನೂಕುನುಗ್ಗಲಿನಿಂದ ಹಲವರಿಗೆ ಗಾಯ-ಕಾರ್ಯಕ್ರಮ ಸ್ಥಗಿತಗೊಳಿಸಿದ ಪೋಲಿಸರು

- Advertisement -
- Advertisement -

ಕಾಸರಗೋಡು: ಹೊಸ ಬಸ್ ಸ್ಟ್ಯಾಂಡ್‌ ಸಮೀಪವಿರುವ ಮೈದಾನದಲ್ಲಿ ನಡೆದ ಸಂಗೀತ ರಸಮಂಜರಿ ಕಾರ್ಯಕ್ರಮದ ವೇಳೆ ನಿರೀಕ್ಷೆಗೂ ಮೀರಿ ಸೇರಿದ್ದ ಜನಸಂದಣಿಯಿಂದ ನೂಕುನುಗ್ಗಲು ಸಂಭವಿಸಿ, ಕನಿಷ್ಠ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನ.23ರ ರಾತ್ರಿ ನಡೆದಿದೆ. ಗಾಯಗೊಂಡವರಲ್ಲಿ ಮಹಿಳೆಯರು, ಮಕ್ಕಳು ಸೇರಿದ್ದು, ಗಾಯಾಳುಗಳನ್ನು ಕಾಸರಗೋಡು ನಗರದ ಹಲವು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕಾರ್ಯಕ್ರಮ ಆಯೋಜಿಸಿದ ಐವರ ವಿರುದ್ಧ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಸರಗೋಡು ಫ್ರೀ ಯುವಜನ ಸಂಘಟನೆ ವತಿಯಿಂದ ನುಳ್ಳಿಪ್ಪಾಡಿ ಪ್ರದೇಶದಲ್ಲಿ ಆಯೋಜಿಸಿದ್ದ ಜನಪ್ರಿಯ ಹಿನ್ನೆಲೆ ಗಾಯಕ ಹನಾನ್ ಷಾ ಅವರ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿ ಸಾವಿರಾರು ಮಂದಿ ಸೇರಿದ್ದರು. ಕಾರ್ಯಕ್ರಮಕ್ಕೆ ಟಿಕೆಟ್ ವ್ಯವಸ್ಥೆ ಮಾಡಲಾಗಿತ್ತು. ಟಿಕೆಟ್ ಪಡೆದವರ ಜೊತೆ ಟಿಕೆಟ್ ಇಲ್ಲದವರೂ ಪ್ರಮುಖ ಗಾಯಕರನ್ನು ನೋಡುವ ಉತ್ಸಾಹದಲ್ಲಿ ಮೈದಾನಕ್ಕೆ ಒಳನುಗಲು ಯತ್ನಿಸಿದಾಗ ಗೊಂದಲ ಸೃಷ್ಟಿಯಾಗಿದೆ. ಈ ನೂಕು ನುಗ್ಗಲಿನಿಂದಾಗಿ ಹಲವರಿಗೆ ಉಸಿರಾಟದ ತೊಂದರೆ ಉಂಟಾಗಿ ಕುಸಿದು ಬಿದ್ದರು ಎನ್ನಲಾಗಿದೆ. ಪೊಲೀಸರು ನೀಡಿದ್ದ ಮುನ್ನೆಚ್ಚರಿಕೆಯನ್ನೂ ನಿರ್ಲಕ್ಷಿಸಿದ್ದರು ಎಂದು ಆರೋಪಿಸಲಾಗಿದೆ.

ಆ ಬಳಿಕ ಗುಂಪನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸರು ಲಾರಿ ಪ್ರಹಾರ ನಡೆಸಿ ಜನರನ್ನು ಚದುರಿಸಬೇಕಾಯಿತು. ಕಾರ್ಯಕ್ರಮದ ಆರಂಭಕ್ಕೂ ಮುನ್ನ ಜಮಾಯಿಸಿದ್ದ ಜನಸಂದಣಿಯಿಂದ ಸಂಚಾರಕ್ಕೆ ಕೆಲಕಾಲ ತೊಂದರೆ ಉಂಟಾಯಿತು.

ಹನಾನ್ ಷಾ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಮಾಹಿತಿ ಹರಡುತ್ತಿದ್ದಂತೆ ಜನರ ಸಂಖ್ಯೆ ಹೆಚ್ಚಾಯಿತು. ನಿರೀಕ್ಷೆಗೂ ಅಧಿಕ ಜನರು ಆಗಮಿಸಿದ್ದ ಕಾರಣ ಆಯೋಜಕರು ಕಾರ್ಯಕ್ರಮವನ್ನು ಸ್ಥಗಿತಗೊಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯ್ ಭರತ್ ರೆಡ್ಡಿ ವೇದಿಕೆಯೇರಿ ಕಾರ್ಯಕ್ರಮ ಸ್ಥಗಿತವಾಗಿರುವ ಕುರಿತು ಮಾಹಿತಿ ನೀಡಿದರು.

- Advertisement -

Related news

error: Content is protected !!