Saturday, May 18, 2024
spot_imgspot_img
spot_imgspot_img

ಜಾನ್ಸನ್ ಆ್ಯಂಡ್ ಜಾನ್ಸನ್ ಸಿಂಗಲ್ ಡೋಸ್ ಲಸಿಕೆಯ ತುರ್ತು ಬಳಕೆಗೆ ಅನುಮತಿ!

- Advertisement -G L Acharya panikkar
- Advertisement -

ನವದೆಹಲಿ: ಅಮೆರಿಕ ಮೂಲದ ಖ್ಯಾತ ಔಷಧ ತಯಾರಿಕಾ ಸಂಸ್ಥೆ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆ ತನ್ನ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ಲಸಿಕೆಯ ತುರ್ತು ಬಳಕೆಗೆ ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಕೆ ಮಾಡಿದ್ದು ಈ ಮನವಿಯನ್ನು ಕಂಪೆನಿ ಪುರಸ್ಕರಿಸಿದೆ.

ಭಾರತದಲ್ಲಿ ಈಗಾಗಲೇ ಕೊವ್ಯಾಕ್ಸಿನ್, ಕೋವಿಶೀಲ್ಡ್, ಸ್ಪುಟ್ನಿಕ್-ವಿ, ಮಾಡೆರ್ನಾ ಕೊರೊನಾ ಲಸಿಕೆಗಳ ಬಳಕೆಗೆ ಅನುಮತಿ ಸಿಕ್ಕಿದೆ. ಇದರ ಜೊತೆಗೆ ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಸಿಂಗಲ್ ಡೋಸ್ ಲಸಿಕೆಯ ತುರ್ತು ಬಳಕೆಗೂ ಅನುಮತಿ ಸಿಕ್ಕಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವಿಯಾ ಮಾಹಿತಿ ನೀಡಿದ್ದಾರೆ.

ಆಗಸ್ಟ್ 5ರಂದು ಜಾನ್ಸನ್ ಆ್ಯಂಡ್ ಜಾನ್ಸನ್ ಪ್ರೈವೇಟ್ ಲಿಮಿಟೆಡ್ ತನ್ನ ಸಿಂಗಲ್ ಡೋಸ್ ಕೋವಿಡ್ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡುವಂತೆ (EUA) ಭಾರತ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. ಈ ಜಾನ್ಸನ್ ಆ್ಯಂಡ್ ಜಾನ್ಸನ್ ಸಂಸ್ಥೆಯ ಕೋವಿಡ್ ಲಸಿಕೆಯು ಕೊರೊನಾ ಸೋಂಕಿನ ವಿರುದ್ಧ ಶೇ.85 ರಷ್ಟು ಪರಿಣಾಮಕಾರಿಯಾಗಿದೆ ಎಂಬ ವಿಷಯ ಪ್ರಯೋಗಗಳಿಂದ ತಿಳಿದುಬಂದಿದೆ.

ಭಾರತದ ಜನರಿಗೆ ಹಾಗೂ ವಿಶ್ವದ ಇತರೆ ದೇಶಗಳಿಗೆ ಬಯೋಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ಏಕ ಡೋಸ್ ಕೊರೊನಾ ಲಸಿಕೆ ಪರಿಚಯಿಸಲು ಈ ಅನುಮೋದನೆ ಒಂದು ಪ್ರಮುಖ ಮೈಲುಗಲ್ಲಾಗಿದೆ ಎಂದು ಜಾನ್ಸನ್ ಆ್ಯಂಡ್ ಜಾನ್ಸನ್ ಇಂಡಿಯಾ ವಕ್ತಾರರು ಹೇಳಿದ್ದರು. ಈ ಹೊಸ ಲಸಿಕೆಯನ್ನು ಎರಡೊ ಡೋಸ್ ನಲ್ಲಿ ಪಡೆಯುವ ಅಗತ್ಯವಿಲ್ಲ, ಒಂದು ಡೋಸ್ ತೆಗೆದುಕೊಂಡರೆ ಸಾಕಾಗುತ್ತದೆ. ಇದೇ ಈ ಲಸಿಕೆಯ ವಿಶೇಷತೆಯಾಗಿದೆ.

- Advertisement -

Related news

error: Content is protected !!