Saturday, April 27, 2024
spot_imgspot_img
spot_imgspot_img

ಜಿ.ಪಂ, ತಾ.ಪಂ ಮೀಸಲು ನಿಗದಿ ಅಧಿಕಾರ ಕಿತ್ತುಕೊಂಡ ರಾಜ್ಯ ಸರ್ಕಾರ; ವಿಚಾರಣೆ ಮುಂದೂಡಿಕೆ

- Advertisement -G L Acharya panikkar
- Advertisement -

ಬೆಂಗಳೂರು : ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸೇರಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮೇ 23ಕ್ಕೆ ಮುಂದೂಡಿದೆ.

ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿಗೆ ರಾಜ್ಯ ಸರ್ಕಾರ ಪ್ರತ್ಯೇಕ ಆಯೋಗವನ್ನು ರಚನೆ ಮಾಡಿದೆ. ಇದರಿಂದ ಚುನಾವಣೆ ವಿಳಂಬವಾಗುತ್ತಿದೆ. ಆದ್ದರಿಂದ ಅರ್ಜಿ ವಿಚಾರಣೆಯನ್ನು ತುರ್ತಾಗಿ ನಡೆಸಲು ಕೋರಿ ರಾಜ್ಯ ಚುನಾವಣಾ ಆಯೋಗದಿಂದ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯನ್ನು ನ್ಯಾ.ಎಸ್.ಜಿ ಪಂಡಿತ್ ಮತ್ತು ನ್ಯಾ. ಎಂ.ಜಿ ಉಮಾ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿದ್ದು ಗಂಭೀರವಾಗಿ ಪರಿಗಣಿಸಿದೆ.

ವಿಚಾರಣೆ ವೇಳೆ ಚುನಾವಣಾ ಆಯೋಗವನ್ನು ಪ್ರಶ್ನಿಸಿದ ಪೀಠ, ತಾ.ಪಂ ಮತ್ತು ಜಿ.ಪಂ ಚುನಾವಣೆಗಳನ್ನು ತಕ್ಷಣವೇ ನಡೆಸುವಂತೆ ಕಳೆದ ವಾರ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಅದರಂತೆ ಆಯೋಗ ಚುನಾವಣೆಗಳನ್ನು ನಡೆಸುವುದನ್ನು ಬಿಟ್ಟು ಬಾಕಿ ಇರುವ ಅರ್ಜಿಯನ್ನು ಮುಂದಿಟ್ಟು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿರುವುದೇಕೆ ಎಂದು ಪ್ರಶ್ನಿಸಿತು.

ಈ ವೇಳೆ ಚುನಾವಣಾ ಆಯೋಗದ ಪರ ವಕೀಲರು ಕೋರ್ಟಿಗೆ ವಿವರಣೆ ನೀಡಿ, ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಪಟ್ಟಿಯನ್ನು ರಚಿಸುವ ಚುನಾವಣಾ ಆಯೋಗದ ಅಧಿಕಾರವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಇವುಗಳಿಲ್ಲದೆ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿ ಪ್ರಕಟಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ತಿಳಿಸಿದರು. ವಾದ ಆಲಿಸಿದ ಪೀಠ, ಈ ಕುರಿತಂತೆ ವಿವರವಾಗಿ ಪರಿಶೀಲಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟು ವಿಚಾರಣೆಯನ್ನು ಮೇ 23ಕ್ಕೆ ಮುಂದೂಡಿತು.

- Advertisement -

Related news

error: Content is protected !!