Friday, April 26, 2024
spot_imgspot_img
spot_imgspot_img

ಜಿ.ಪಂ. ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣ; ವಿನಯ್ ಕುಲಕರ್ಣಿ ಆಪ್ತ ಕಾರ್ಯದರ್ಶಿ ಸೋಮು ನ್ಯಾಮಗೌಡ ಸಿಬಿಐ ವಶಕ್ಕೆ!

- Advertisement -G L Acharya panikkar
- Advertisement -

ಧಾರವಾಡ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳಗ್ಗೆ ಮತ್ತೊಬ್ಬರನ್ನು ಸಿಬಿಐ ಅಧಿಕಾರಿಗಳ ತಂಡ ಬಂಧಿಸಿದೆ.

ಸಿಬಿಐ ಅಧಿಕಾರಿಗಳ ತಂಡ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಸೋಮು ನ್ಯಾಮಗೌಡ ಅವರನ್ನು ವಶಕ್ಕೆ ಪಡೆದಿದ್ದು, ಈ ಹಿಂದೆ ಹಲವಾರು ಉಪನಗರ ಠಾಣೆಗೆ ಸೋಮು ಅವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೊಳಪಡಿಸಿದ್ದರು. ಇದೀಗ ಇಂದು ಬೆಳಗ್ಗೆ ನ್ಯಾಮಗೌಡ ಅವರನ್ನು ಗದಗದಲ್ಲಿ ವಶಕ್ಕೆ ತೆಗೆದುಕೊಂಡು ಧಾರವಾಡ ಉಪನಗರ ಠಾಣೆಗೆ ಕರೆತರಲಾಗುತ್ತಿದೆ.

ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿನಯ್ ಕುಲಕರ್ಣಿ ಅವರ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ. ಈಗಾಗಲೇ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಹೈಕೋರ್ಟ್ ತಿರಸ್ಕರಿಸಿದ್ದರಿಂದ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

- Advertisement -

Related news

error: Content is protected !!