Saturday, May 11, 2024
spot_imgspot_img
spot_imgspot_img

ಜಿ7 ಶೃಂಗಸಭೆಗಾಗಿ ಜೂನ್ 26-27 ರಂದು ಜರ್ಮನಿಗೆ, 28ರಂದು ಯುಎಇಗೆ ಪ್ರಧಾನಿ ಮೋದಿ ಭೇಟಿ

- Advertisement -G L Acharya panikkar
- Advertisement -

ದೆಹಲಿ: 2022ರ ಜೂನ್ 26-27 ರಂದು G7 ಶೃಂಗಸಭೆಗೆ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಜರ್ಮನಿಗೆ ಭೇಟಿ ನೀಡಲಿದ್ದಾರೆ. ಅಲ್ಲಿ ಭಾಗವಹಿಸುವ ಕೆಲವು ದೇಶಗಳ ನಾಯಕರೊಂದಿಗೆ ಪ್ರಧಾನಿ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ. ಶೃಂಗಸಭೆಯ ಸಂದರ್ಭದಲ್ಲಿ ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವ ಬಗ್ಗೆ ಎರಡು ಅಧಿವೇಶನಗಳಲ್ಲಿ ಪ್ರಧಾನಿ ಮಾತನಾಡುವ ನಿರೀಕ್ಷೆಯಿದೆ ಎಂದು ಎಂಇಎ ಪ್ರಕಟಣೆ ತಿಳಿಸಿದೆ. ಈ ಪ್ರಮುಖ ವಿಷಯಗಳಲ್ಲಿ ಅಂತರರಾಷ್ಟ್ರೀಯ ಸಹಯೋಗವನ್ನು ಬಲಪಡಿಸುವ ಪ್ರಯತ್ನದಲ್ಲಿ ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾದಂತಹ ಇತರ ಪ್ರಜಾಪ್ರಭುತ್ವ ರಾಷ್ಟ್ರಗಳನ್ನು ಸಹ ಆಹ್ವಾನಿಸಲಾಗಿದೆ.

ಮೋದಿ ಜರ್ಮನಿಯಲ್ಲಿ ಶ್ಲೋಸ್ಎಲ್ಮೊ ಗೆ ಭೇಟಿ ನೀಡಲಿದ್ದಾರೆ. ಶೃಂಗಸಭೆಯ ನಂತರ ಜೂನ್ 28 ರಂದು ಯುಎಇಗೆ ಪ್ರಯಾಣಿಸಲಿದ್ದು, ಮಾಜಿ ಯುಎಇ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ಸಂತಾಪ ಸೂಚಿಸುತ್ತಾರೆ. ಯುಎಇಯ ಹೊಸ ಅಧ್ಯಕ್ಷ ಮತ್ತು ಅಬುಧಾಬಿಯ ಆಡಳಿತಗಾರರಾಗಿ ಆಯ್ಕೆಯಾದ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಮೋದಿ ಅಭಿನಂದಿಸಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

- Advertisement -

Related news

error: Content is protected !!