Wednesday, April 24, 2024
spot_imgspot_img
spot_imgspot_img

ಜು.20ರ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ಎಸ್‌.ಸುರೇಶ್‌ ಕುಮಾರ್‌

- Advertisement -G L Acharya panikkar
- Advertisement -

ಬೆಂಗಳೂರು: ಇದೇ ಜುಲೈ 20ರ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಈ ಬಾರಿ ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದಲ್ಲಿ ನಿರ್ಣಯಿಸುವ ಕಾರಣ, ಈ ವಿದ್ಯಾರ್ಥಿಗಳಿಗೆ ತಮ್ಮ ಎಸ್ಸೆಸ್ಸೆಲ್ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳನ್ನು ಆನ್‌ಲೈನ್‌ ಮೂಲಕ ನೋಡಿ ಸರಿಪಡಿಸಿಕೊಳ್ಳಲು ಅವಕಾಶವಿದೆ.

“ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲಾ ವಿದ್ಯಾರ್ಥಿಗಳನ್ನು ಪಿಯುಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲಾ ರೀತಿಯಾದ ಕ್ರಮಗಳನ್ನು ತೆಗದುಕೊಳ್ಳಲಿದೆ” ಎಂದು ಸುರೇಶ್‌ ಕುಮಾರ್‌‌ ತಿಳಿಸಿದ್ದಾರೆ.

“ರಾಜ್ಯದಲ್ಲಿನ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪಿಯುಸಿ ಸೀಟುಗಳನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳಲಾಗುವುದು. ಖಾಸಗಿ ಶಾಲೆಗಳಿಂದಲೂ ಸೀಟುಗಳ ಹೆಚ್ಚಳದ ಬಗ್ಗೆ ಕೋರಿಕೆಗಳು ಬಂದಲ್ಲಿ ಪರಿಗಣಿಸಿ, ಎಲ್ಲಾ ವಿದ್ಯಾರ್ಥಿಗಳಿಗೂ ಕೂಡಾ ಪಿಯುಸಿ ಸೀಟು ದೊರೆಯುವಂತೆ ವ್ಯವಸ್ಥೆ ಕಲ್ಪಿಸಲಾಗುವುದು” ಎಂದಿದ್ದಾರೆ.

ಎಸ್‌ಟಿಎಸ್‌ ವೆಬ್‌ ಪೋರ್ಟಲ್‌ನಲ್ಲಿ https://sts.karnataka.gov.in/SATSPU/# ಈ ಲಿಂಕ್ ಬಳಸಿ ಅಂಕಗಳನ್ನು ಪರಿಶೀಲಿಸಬಹುದು. ಈ ವೆಬ್ ಪೋರ್ಟಲ್‌ನಲ್ಲಿ ಇಲಾಖೆ ನೀಡಿರುವ ಎಸ್‌ಎಟಿಎಸ್ ಸಂಖ್ಯೆ ಅಥವಾ ಕಾಲೇಜಿನಲ್ಲಿ ನೀಡಿದ್ದ ವಿದ್ಯಾರ್ಥಿ ಸಂಖ್ಯೆ ಅಥವಾ ಪರೀಕ್ಷಾ ನೋಂದಣಿ ಸಂಖ್ಯೆ ಈ ಮೂರರ ಪೈಕಿ ಯಾವುದಾದರೂ ಒಂದನ್ನು ನಮೂದಿಸಿ ಪರಿಶೀಲಿಸಬಹುದು.

ಫಲಿತಾಂಶ ಅಥವಾ ಅಂಕಗಳಲ್ಲಿ ವ್ಯತ್ಯಾಸ ಕಂಡುಬಂದಲ್ಲಿ ಜುಲೈ 12ರ ಒಳಗೆ ತಮ್ಮ ಶಾಲೆ ಅಥವಾ ಕಾಲೇಜಿನ ಪ್ರಾಂಶುಪಾಲರನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಅದನ್ನು ಪ್ರಾಂಶುಪಾಲರು ಸರಿಪಡಿಸಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

- Advertisement -

Related news

error: Content is protected !!